ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಂಗನಾಥಸ್ವಾಮಿ ಬ್ರಹ್ಮರಥೋತ್ಸವ

Last Updated 17 ಮೇ 2022, 4:03 IST
ಅಕ್ಷರ ಗಾತ್ರ

ಸೊರಬ: ಪಟ್ಟಣದ ಆರಾಧ್ಯ ದೈವ ರಂಗನಾಥಸ್ವಾಮಿಯ ಬ್ರಹ್ಮ ರಥೋತ್ಸವವು ಸೋಮವಾರ ವಿಜೃಂಭಣೆಯಿಂದ ಜರುಗಿತು.

ತಹಶೀಲ್ದಾರ್ ಮಂಜುಳಾ ಬಿ. ಹೆಗಡಾಳ್ ರಥೋತ್ಸವಕ್ಕೆ ಚಾಲನೆ ನೀಡಿದರು. ಅರ್ಚಕ ನಾರಾಯಣ
ಭಟ್ ಮರಾಠೆ ನೇತೃತ್ವದಲ್ಲಿ ಧಾರ್ಮಿಕ ವಿಧಿ–ವಿಧಾನಗಳು ಜರುಗಿದವು. ಮಧ್ಯಾಹ್ನ ಸಾರ್ವಜನಿಕರಿಗೆ ಅನ್ನ ಸಂತರ್ಪಣೆ ನಡೆಯಿತು.

ವಿಧಾನಪರಿಷತ್ ಸದಸ್ಯೆ ಭಾರತಿ ಶೆಟ್ಟಿ, ಪುರಸಭೆ ಅಧ್ಯಕ್ಷ ಈರೇಶ ಮೇಸ್ತ್ರಿ, ಉಪಾಧ್ಯಕ್ಷ ಮಧುರಾಯ್ ಜಿ.ಶೇಟ್, ಸದಸ್ಯರಾದ ನಟರಾಜ ಉಪ್ಪಿನ್, ಪ್ರಭು ಮೇಸ್ತ್ರಿ, ಪ್ರಮುಖರಾದ ಟಿ.ಆರ್. ಸುರೇಶ್, ಬಂದಿಗೆ ಬಸವರಾಜ ಶೇಟ್, ಎಲ್.ಗಿರೀಶ್ ಸೇರಿ ಜನಪ್ರತಿನಿಧಿಗಳು, ಪುರ ನಾಗರಿಕರು ಪಾಲ್ಗೊಂಡಿದ್ದರು. ರಥೋತ್ಸವದ ಅಂಗವಾಗಿ ಮಂಗಳವಾರ ರಾತ್ರಿ 8 ಗಂಟೆಗೆ ಗುರುದತ್ತ ನಾಡಿಗೇರ್ ರಾಣೆಬೆನ್ನೂರು ಮತ್ತು ಸಂಗಡಿಗರಿಂದ ತಬಲ ಮತ್ತು ಕೊಳಲು ಜುಗಲಬಂದಿ
ಹಾಗೂ ದಾಸವಾಣಿ ಕಾರ್ಯಕ್ರಮ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT