ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಅಭಿವೃದ್ಧಿ ವಿಚಾರದಲ್ಲಿ ಕಾಗೋಡು ಮೌನ ಮುರಿಯಲಿ: ರತ್ನಾಕರ್ ಹೋನಗೋಡು

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ರತ್ನಾಕರ್ ಹೋನಗೋಡು
Published 11 ಫೆಬ್ರುವರಿ 2024, 14:36 IST
Last Updated 11 ಫೆಬ್ರುವರಿ 2024, 14:36 IST
ಅಕ್ಷರ ಗಾತ್ರ

ಆನಂದಪುರ: ‘ಸಾಗರ ಕ್ಷೇತ್ರದ ಅಭಿವೃದ್ದಿ ವಿಚಾರದಲ್ಲಿ ಕಾಗೋಡು ತಿಮ್ಮಪ್ಪ ಮೌನ ವಹಿಸದೆ ಪ್ರಗತಿಯ ಬಗ್ಗೆ ಚಿಂತನೆ ಮಾಡಬೇಕು’ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ರತ್ನಾಕರ್ ಹೋನಗೋಡು ಒತ್ತಾಯಿಸಿದರು.

ಅವರು ಆನಂದಪುರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

‘ಈ ಹಿಂದೆ ಹರತಾಳು ಹಾಲಪ್ಪನವರು ಸಾಕಷ್ಟು ಅಭಿವೃದ್ಧಿ ಪರ ಕೆಲಸಗಳನ್ನು ಮಾಡಿದ್ದರೂ ಕಾಗೋಡು ತಿಮ್ಮಪ್ಪ ಹೋರಾಟ ಮಾಡುತ್ತಿದ್ದರು. ಆದರೆ, ಇಂದು ಕ್ಷೇತ್ರದಲ್ಲಿ ರೈತರಿಗೆ ತೊಂದರೆ, ಭ್ರಷ್ಟಾಚಾರಗಳು ನಡೆಯುತ್ತಿದ್ದರೂ ಚಕಾರವೆತ್ತುತ್ತಿಲ್ಲ. ಮುಂದಿನ ದಿನಗಳಲ್ಲಿ ಯಾವ ಪಕ್ಷದವರು ತಪ್ಪು ಮಾಡಿದರೂ ಖಂಡಿಸುವ ಕೆಲಸ ಮಾಡಬೇಕು. ಸಾರ್ವಜನಿಕರಿಗೆ ತೊಂದರೆ ಆದಾಗ ಗಮನ ಹರಿಸುವ ಕೆಲಸವನ್ನು ನೀವು ಮಾಡಬೇಕು. ನಿಮ್ಮ ಕಾಲದಲ್ಲಿ ಹಾಗೂ ಹರತಾಳು ಹಾಲಪ್ಪ ಅವರ ಅವಧಿಯಲ್ಲಿ ಕ್ಷೇತ್ರ ಹೇಗೆ ಅಭಿವೃದ್ದಿಯಾಗಿತ್ತು ಎಂಬುದನ್ನು ಗಮನಿಸಬೇಕು’ ಎಂದು ಹೇಳಿದರು.

‘ಕಾಗೋಡು ತಿಮ್ಮಪ್ಪ ಅವರ ಭರವಸೆಯ ಮೇಲೆ ಕಾಂಗ್ರೆಸ್ ಜಯಗಳಿಸಿದೆ. ಹಾಗಾಗಿ, ಈ ನಿಟ್ಟಿನಲ್ಲಿ ಚಿಂತನೆ ಮಾಡಬೇಕು. ಅವರಿಗೆ ಅಭಿವೃದ್ಧಿ ಬಗ್ಗೆ ಮಾತನಾಡುವ ಹಕ್ಕಿದ್ದು, ಶಾಸಕರಿಗೆ ಮನವರಿಕೆ ಮಾಡಿಕೊಡುವ ಕೆಲಸ ಮಾಡಬೇಕು’ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ರೇವಪ್ಪ ಹೊಸಕೊಪ್ಪ, ಗಣಪತಿ ಇರುವಕ್ಕಿ, ನಟರಾಜ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT