ಶಿವಮೊಗ್ಗ:ಲೋಕಸಭಾ ಕ್ಷೇತ್ರವನ್ನು ಮಾದರಿ ಕ್ಷೇತ್ರವಾಗಿ ರೂಪಿಸಲು ಸರ್ವ ಪ್ರಯತ್ನ ಮಾಡಲಾಗುವುದು. ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುತ್ತೇನೆ ಎಂದು ವಿಜೇತ ಅಭ್ಯರ್ಥಿ ಬಿಜೆಪಿಯ ಬಿ.ವೈ.ರಾಘವೇಂದ್ರ ಭರವಸೆ ನೀಡಿದರು.

ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ನಂತರ ಅವರು ಸುದ್ದಿಗಾರರ ಜತೆ ಮಾತನಾಡಿದರು.

ಪ್ರಚಾರದ ಸಮಯದಲ್ಲಿ ಬಿಸಿಲನ್ನೂ ಲೆಕ್ಕಿಸದೆ ಭಾರಿ ಸಂಖ್ಯೆಯ ಜನರೂ ಬಂದಿದ್ದರು. ಅಮಿತ್ ಶಾ, ನಿರ್ಮಲ ಸೀತಾರಾಮನ್ ಕ್ಷೇತ್ರಕ್ಕೆ ಭೇಟಿ ನೀಡಿಬಿಜೆಪಿ ಬೆಂಬಲಿಸುವಂತೆಮನವಿ ಮಾಡಿದ್ದರು. ಯಡಿಯೂರಪ್ಪ ಅವರು ಸೇರಿ ಪಕ್ಷದ ಎಲ್ಲ ಶಾಸಕರು, ಮುಖಂಡರು ಶ್ರಮಿಸಿದ್ದರು. ಕಾರ್ಯಕರ್ತರು ಪ್ರತಿ ಬೂತ್ಮಟ್ಟಕ್ಕೂ ತೆರಳಿ ಪಕ್ಷದ ಧ್ಯೇಯ, ಕಾರ್ಯಕರ್ತರ ಸಾಧನೆ ಜನರಿಗೆ ತಲುಪಿಸಿದ್ದರು. ನಿರೀಕ್ಷೆಗೂ ಮೀರಿ ಜನರು ಗೆಲ್ಲಿಸಿದ್ದಾರೆ ಎಂದು ಹರ್ಷ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರ ಐದು ವರ್ಷ ನಡೆಸಿದ ಭ್ರಷ್ಟಾಚಾರ ಮುಕ್ತ, ಪಾರದರ್ಶಕ ಆಡಳಿತ ಜನರ ಮನ್ನಣೆ ಗಳಿಸಿತ್ತು. ಮೋದಿ ಅವರು ಮತ್ತೊಮ್ಮೆ ಈ ದೇಶದ ಪ್ರಧಾನಿಯಾಗಬೇಕು ಎಂಬ ಅಭಿಲಾಷೆ ಇಟ್ಟುಕೊಂಡು ಜನರು ಭಾರಿ ಮತಗಳ ಅಂತರಿದಂದ ಗೆಲ್ಲಿಸಿದ್ದಾರೆ ಎಂದು ಅಭಿಪ್ರಾಯಪಟ್ಟರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.