ಸೋಮವಾರ, ಜನವರಿ 18, 2021
21 °C

ಗ್ರಾ.ಪಂ. ಚುನಾವಣೆಗೆ ಪಕ್ಷ ಸಿದ್ಧ: ಮಧು ಬಂಗಾರಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಸೊರಬ: ‘ಗ್ರಾಮ ಪಂಚಾಯಿತಿ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿದ್ದು, ನನ್ನ ಸೋಲು–ಗೆಲುವಿನಲ್ಲಿ ಭಾಗಿಯಾಗಿರುವ ಕಾರ್ಯಕರ್ತರನ್ನು ಚುನಾವಣೆಯಲ್ಲಿ ಗೆಲ್ಲಿಸುವುದೇ ನನ್ನ ಗುರಿ’ ಎಂದು ಮಾಜಿ ಶಾಸಕ ಮಧು ಬಂಗಾರಪ್ಪ ಹೇಳಿದರು.

ತಾಲ್ಲೂಕಿನ ಶಕುನವಳ್ಳಿ ಗ್ರಾಮದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಜೆಡಿಎಸ್‌ ಕಾರ್ಯಕರ್ತರು ಹಾಗೂ ಮುಖಂಡರ ಸಭೆಯಲ್ಲಿ ಮಾತನಾಡಿದರು.

‘ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಬೆಂಬಲಿಗರಿಗೆ ಹಾಗೂ ಕಾರ್ಯಕರ್ತರಿಗೆ ಸ್ಥಾನಮಾನ ಕಲ್ಪಿಸುವುದು ನಾಯಕರ ಲಕ್ಷಣ. ಈ ಹಿಂದೆಯೂ ತಾಲ್ಲೂಕಿನ 41 ಗ್ರಾಮ ಪಂಚಾಯಿತಿಗಳಲ್ಲಿ ಬಹುಪಾಲು ಗ್ರಾಮ ಪಂಚಾಯಿತಿ ಅಧಿಕಾರವನ್ನು ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದರು. ಮುಂಬರುವ ಚುನಾವಣೆಯಲ್ಲಿ ನಮ್ಮ ಕಾರ್ಯಕರ್ತರೇ ಗೆಲ್ಲುವಂತೆ ನೋಡಿಕೊಳ್ಳಲಾಗುವುದು’ ಎಂದರು.

ಗ್ರಾಮದ ಅಭಿವೃದ್ಧಿ ದೃಷ್ಟಿಯಿಂದ ಮುಖಂಡರ ಜೊತೆ ಚರ್ಚಿಸಿ ಒಮ್ಮತದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಸದಸ್ಯ ಶಿವಲಿಂಗಗೌಡ, ಮಾಜಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಸದಾನಂದಗೌಡ, ಜೆಡಿಎಸ್ ವಕ್ತಾರ ಎಂ.ಡಿ. ಶೇಖರ್, ಎಪಿಎಂಸಿ ಅಧ್ಯಕ್ಷ ಜೈಶೀಲಪ್ಪ, ಈರಪ್ಪ, ಮೋಹನಗೌಡ, ಬಸವಂತಪ್ಪ ಕೋಟೆ, ಕೃಷ್ಣಮೂರ್ತಿ ನಾಡಿಗ್, ರಾಮಚಂದ್ರ, ಮಂಜುನಾಥ್ ಮೇಷ್ಟ್ರುಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು