ಗುರುವಾರ, 8 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವಮೊಗ್ಗ: ‘ಮುಸ್ಲಿಂ 2 ‘ಬಿ’ ಮೀಸಲಾತಿ ಪುನರ್ ಸ್ಥಾಪಿಸಿ’: ಪ್ರತಿಭಟನೆ

ಎಸ್‌ಡಿಪಿಐ ಖಂಡನೆ, ಪ್ರತಿಭಟನೆ
Last Updated 29 ಮಾರ್ಚ್ 2023, 4:52 IST
ಅಕ್ಷರ ಗಾತ್ರ

ಶಿವಮೊಗ್ಗ: ಮುಸ್ಲಿಂ ಸಮುದಾಯಕ್ಕಿದ್ದ 2ಬಿ ಮೀಸಲಾತಿಯನ್ನು ಪುನರ್ ಸ್ಥಾಪಿಸುವಂತೆ ಒತ್ತಾಯಿಸಿ, ಮಂಗಳವಾರ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

‘ಈ ಹಿಂದಿನ ಸರ್ಕಾರಗಳು ಮುಸ್ಲಿಂ ಸಮುದಾಯವನ್ನು ಹಿಂದುಳಿದ ವರ್ಗ ಎಂದು ವರದಿ ನೀಡಿದ್ದವು. ಅದರ ಅನ್ವಯ ಸಂವಿಧಾನದ ಅಡಿ ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದ ವರ್ಗಕ್ಕೆ ಮೀಸಲಾತಿ ನೀಡಬೇಕು ಎನ್ನುವ ನಿಯಮವಿದೆ. ಆದರೆ ಮುಸ್ಲಿಮರು ಎನ್ನುವ ಕಾರಣಕ್ಕೆ ರಾಜ್ಯದ ಬಿಜೆಪಿ ಸರ್ಕಾರ ಮುಸ್ಲಿಮರಿಗೆ ಇರಿಸಿದ್ದ ಶೇ 4 ರಷ್ಟು ಮೀಸಲಾತಿಯನ್ನು ಮೊಟಕುಗೊಳಿಸುವ ಮೂಲಕ ಕೋಮುವಾದಿತನ ತೋರಿದೆ’ ಎಂದು ಸಂಘಟನೆಯ ಜಿಲ್ಲಾ ಅಧ್ಯಕ್ಷ ಇಮ್ರಾನ್ ಆರೋಪಿಸಿದರು.

ಸಮುದಾಯದ ಸಬಲೀಕರಣಕ್ಕೆ ಸಹಕರಿಸಬೇಕು. ಇಲ್ಲದಿದ್ದರೆ ರಾಜ್ಯದಾದ್ಯಂತ ಹೋರಾಟ ನಡೆಸಲಾಗು
ವುದು’ ಎಂದು ಎಚ್ಚರಿಸಿದರು. ಇರ್ಫಾನ್, ಜಬೀವುಲ್ಲಾ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT