ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಲೆಚುಕ್ಕಿ ರೋಗಕ್ಕೆ ಪರಿಹಾರ ನೀಡಿ: ಕಿಮ್ಮನೆ

Last Updated 10 ಅಕ್ಟೋಬರ್ 2021, 7:30 IST
ಅಕ್ಷರ ಗಾತ್ರ

ತೀರ್ಥಹಳ್ಳಿ: ಎಲೆಚುಕ್ಕಿ ರೋಗದಿಂದ ಅಡಿಕೆ ಬೆಳೆಗಾರರು ಕಂಗಾಲಾಗಿದ್ದಾರೆ. ಸರ್ಕಾರ ರೋಗ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು. ರೈತರಿಗೆ ಪರಿಹಾರ ನೀಡಬೇಕು ಎಂದು ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರಒತ್ತಾಯಿಸಿದರು.

ಆಗುಂಬೆ ಹೋಬಳಿಯ ನಾಲೂರು, ಇಳಿಮನೆ, ಬಿದರಗೋಡು, ತಲ್ಲೂರಂಗಡಿ, ಮಲ್ಲಂದೂರಿನ ಎಲೆಚುಕ್ಕಿ ರೋಗ ತಗುಲಿದ ಅಡಿಕೆ ತೋಟಗಳನ್ನು ವೀಕ್ಷಿಸಿ ಮಾತನಾಡಿದರು.

‘ಈಗಾಗಲೇ ಹಲವು ರೋಗಗಳಿಂದ ಮಲೆನಾಡಿನ ರೈತರು ಕಂಗಾಲಾಗಿದ್ದಾರೆ. ಈಗ ಬಂದಿರುವ ರೋಗದಿಂದ ಅನೇಕ ತೋಟ ಹಾಳಾಗಿದೆ. ಎಲೆಚುಕ್ಕಿ ರೋಗ ನಿಯಂತ್ರಿಸಲು ಅಧಿಕಾರಿಗಳು ಹೆಚ್ಚಿನ ಮಾಹಿತಿ ನೀಡಬೇಕು. ರೈತರಿಗೆ ಸೂಕ್ತವಾದ ಪರಿಹಾರ ನೀಡಲು ಒತ್ತಾಯಿಸುತ್ತೇನೆ’ ಎಂದು ರೈತರಿಗೆ ಭರವಸೆನೀಡಿದರು.

ತಾಲ್ಲೂಕು ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಕೆಸ್ತೂರು ಮಂಜುನಾಥ್, ಎಪಿಎಂಸಿ ನಿರ್ದೇಶಕ ಹಸಿರುಮನೆ ಮಹಾಬಲೇಶ್, ತಾಲ್ಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷ ಹೊಸಳ್ಳಿ ಸುಧಾಕರ್, ಮುಖಂಡರಾದ ಹೊಸೂರು ಗಿರೀಶ್ ಹೆಗ್ಡೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT