ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವಮೊಗ್ಗ: ಗೂಳಿಹಟ್ಟಿ ವಿರುದ್ಧ ವಿವಿಧ ಸಂಘಟನೆಗಳ ಆಕ್ರೋಶ

Last Updated 23 ಸೆಪ್ಟೆಂಬರ್ 2021, 14:40 IST
ಅಕ್ಷರ ಗಾತ್ರ

ಶಿವಮೊಗ್ಗ: ವಿಧಾನಸಭಾ ಅಧಿವೇಶನದಲ್ಲಿ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಅವರು ಕ್ರೈಸ್ತ ಮಿಷನರಿಗಳ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆ ಎಂದು ಕ್ರಿಶ್ಚಿಯನ್ ಪೋರಂ ಫಾರ್ ಹ್ಯೂಮನ್ ರೈಟ್ಸ್ ಅಧ್ಯಕ್ಷ ಡಿ.ರಾಜಶೇಖರ್ ಖಂಡಿಸಿದರು.

ಮತಾಂತರ ವಿಷಯ ಅಧಿವೇಶನದಲ್ಲಿ ಪ್ರಸ್ತಾಪಿಸಿದ್ದಾರೆ. ಮತಾಂತರವನ್ನು ತಡೆಯಲು ಹೋದವರ ಮೇಲೆ ಜಾತಿ ನಿಂದನೆ ಮತ್ತು ಅತ್ಯಾಚಾರದ ಪ್ರಕರಣ ದಾಖಲಿಸಲಾಗುತ್ತಿದೆ ಎಂಬ ಸುಳ್ಳು ಆರೋಪ ಮಾಡಿದ್ದಾರೆ. ರಾಜ್ಯದಲ್ಲಿ ಅಂತಹ ಒಂದು ಪ್ರಕರಣ ದಾಖಲಾಗಿಲ್ಲ ಎಂದು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ವಿಧಾನಸೌಧದ ಅಧಿವೇಶನದಲ್ಲಿ ಸಮುದಾಯ ಗುರಿಯಾಗಿರಿಸಿಕೊಂಡು ಅವಮಾನಿಸಲಾಗಿದೆ. ಘಟನೆಯನ್ನು ರಾಜ್ಯದ ಎಲ್ಲಾ ಕ್ರೈಸ್ತ ಸಮುದಾಯಗಳು ಒಕ್ಕೊರಲಿನಿಂದ ಖಂಡಿಸುತ್ತವೆ. ಸಭಾಪತಿ, ಗೃಹ ಸಚಿವರು ಸಹ ರಾಜ್ಯದಲ್ಲಿ ಮತಾಂತರ ವಿರೋಧಿ ಕಾನೂನು ಜಾರಿಗೆ ತರುವುದಾಗಿ ಹೇಳಿದ್ದಾರೆ. ಸರ್ಕಾರ ಈ ವಿಷಯ ಕುರಿತು ಸವಿಸ್ತಾರವಾಗಿ ಚರ್ಚಿಸಬೇಕು ಎಂದು ಆಗ್ರಹಿಸಿದರು.

ಕೆಲವು ಸಂಘಟನೆಗಳು ಪ್ರಾರ್ಥಾನಾಲಯಗಳ ಮೇಲೆ ದಾಳಿ ಮಾಡಿವೆ. ಗುರುಗಳನ್ನು ಎಲ್ಲರ ಎದುರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೈಬಲ್ ಗ್ರಂಥ ಸುಟ್ಟುಹಾಕಿದ್ದಾರೆ. ಆದರೆ, ಇವರೆಗೂ ಆಸೆ, ಆಮಿಷವೊಡ್ಡಿ ಒತ್ತಾಯದ ಮತಾಂತರ ಮಾಡಿರುವ ಯಾವ ಪ್ರಕರಣಗಳೂ ಸಾಬೀತಾಗಿಲ್ಲ ಎಂದರು.

ಪ್ರಾರ್ಥನೆಗಳಲ್ಲಿ ಭಾಗವಹಿಸುವ ಭಕ್ತರ ಧಾರ್ಮಿಕ ಸ್ವಾತಂತ್ರ್ಯ ಕಿತ್ತುಕೊಳ್ಳುವ ಕಾಯ್ದೆ ಜಾರಿಗೆ ತಂದು ಕ್ರೈಸ್ತರ ಧಾರ್ಮಿಕ ಸ್ವಾತಂತ್ರ್ಯಕ್ಕೆ ಧಕ್ಕೆ ತರುವ ಹುನ್ನಾರ ಸ್ಪಷ್ಟವಾಗಿ ಕಾಣುತ್ತಿದೆ. ನಿರಂತರ ದೌರ್ಜನ್ಯ, ದಬ್ಬಾಳಿಕೆಗಳು ಮುಂದುವರಿದರೆ ಕಾನೂನು ಬದ್ಧ ಹೋರಾಟ ಮಾಡುತ್ತೇವೆ ಎಂದು ಮಾಹಿತಿ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಜೆ.ಭಾಸ್ಕರ್ ಬಾಬು, ಎಂ.ಎಸ್.ಸ್ಯಾಮ್ಯುಯೆಲ್, ಹರೀಶ್, ಶಿವರಾಜ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT