ಶಿವಮೊಗ್ಗ: ಜನವರಿ 26ರಂದು ನಗರದ ನೆಹರೂ ಕ್ರೀಡಾಂಗಣದಲ್ಲಿ ಗಣರಾಜ್ಯೋತ್ಸವ ಆಚರಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಗಣರಾಜ್ಯೋತ್ಸವ ಆಚರಣೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಅಂದು ಬೆಳಿಗ್ಗೆ 9 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಧ್ವಜಾರೋಹಣ ನೆರವೇರಿಸಲಿದ್ದು, ಆಕರ್ಷಕ ಪಥಸಂಚಲನ ನಡೆಯಲಿದೆ. ಶಾಲಾ ವಿದ್ಯಾರ್ಥಿಗಳಿಂದ ಸಾಮೂಹಿಕ ನೃತ್ಯ ಕಾರ್ಯಕ್ರಮ ನಡೆಯಲಿದ್ದು, ಸಂಜೆ 6 ರಿಂದ ರಾತ್ರಿ 9ರವರೆಗೆ ನಗರದ ಕುವೆಂಪು ರಂಗಮಂದಿರದಲ್ಲಿ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿವೆ ಎಂದರು.

ಈ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜಿಸಲು ಹಲವು ಸಮಿತಿಗಳ ರಚಿಸಲಾಗಿದೆ. ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಉಸ್ತುವಾರಿಗೆ ನಿಯೋಜಿಸಲಾಗಿದೆ. ಸಂಭ್ರಮಾಚರಣೆ ಅಂಗವಾಗಿ ಮಹಾನಗರ ಪಾಲಿಕೆ ಮತ್ತು ಶಿಮುಲ್ ವತಿಯಿಂದ ಗಣ್ಯರು ಮತ್ತು ಸಾರ್ವಜನಿಕರಿಗೆ ಸಿಹಿ ಹಂಚಿಕೆ, ವಿದ್ಯಾರ್ಥಿಗಳಿಗೆ ಉಪಹಾರ ವ್ಯವಸ್ಥೆ ಮಾಡುವಂತೆ ತಿಳಿಸಿದರು.

ಸಭೆಯಲ್ಲಿ ಎಸ್ಪಿ ಬಿ.ನಿಖಿಲ್, ಎಡಿಸಿ ವಿ.ಅಭಿಷೇಕ್, ಪಾಲಿಕೆ ಆಯುಕ್ತ ಮಾಯಣ್ಣ ಗೌಡ, ಕೆಎಸ್ಆರ್ಪಿ ಕಮಾಂಡೆಂಟ್ ಯುವಕುಮಾರ್, ಎಸಿ ಸತ್ಯನಾರಾಯಣ, ಸೂಡಾ ಆಯುಕ್ತ ವಿಶ್ವನಾಥ ಮುದಜ್ಜಿ, ತಹಶೀಲ್ದಾರ್ ರಾಜೀವ್ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.