ಮಂಗಳವಾರ, ಆಗಸ್ಟ್ 3, 2021
26 °C

ಹಸೂಡಿ ಕ್ಯಾಂಪ್‌ಗೆ ಆಹಾರ ಪೂರೈಸಲು ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿವಮೊಗ್ಗ: ಹಕ್ಕಿಪಿಕ್ಕಿ ಕ್ಯಾಂಪ್ ಹಾಗೂ ಹರಪ್ಪನಹಳ್ಳಿ ಕ್ಯಾಂಪ್ ಗ್ರಾಮಸ್ಥರಿಗೆ ಆಹಾರ ಸಾಮಾಗ್ರಿ ವಿತರಿಸಬೇಕು. ಮೂಲ ಸೌಕರ್ಯ ಕಲ್ಪಿಸಬೇಕು ಎಂದು ಆಗ್ರಹಿಸಿ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ವೇದಾ ವಿಜಯಕುಮಾರ್ ಬುಧವಾರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಪಂಜಾಬ್‌ನಿಂದ ಹಿಂದಿರುಗಿದ ಹಕ್ಕಿಪಿಕ್ಕಿ ಕ್ಯಾಂಪ್‌ನ ಮೂವರಿಗೆ ಕೊರೊನಾ ಸೋಂಕು ತಗುಲಿದ ಪರಿಣಾಮ ಹಸೂಡಿ ಹಕ್ಕಿಪಿಕ್ಕಿ ಕ್ಯಾಂಪ್, ಹರಪ್ಪನಹಳ್ಳಿ ಕ್ಯಾಂಪ್‌ಗಳನ್ನು ಸೀಲ್‌ಡೌನ್ ಮಾಡಲಾಗಿದೆ. ಇದರಿಂದ ಈ ಎರಡೂ ಗ್ರಾಮಗಳ ಜನರು ಅಕ್ಷರಶಃ ಬಂಧಿಗಳಾಗಿದ್ದಾರೆ. ಯಾರೂ ಹೊರಗೆ ಬರುವ ಹಾಗಿಲ್ಲ. ಹಾಗಾಗಿ, ಅವರ ಜೀವನ ನಿರ್ವಹಣೆ ತುಂಬಾ ಕಷ್ಟವಾಗಿದೆ. ಇಂತಹ ಸಂದಿಗ್ಧ ಸಮಯದಲ್ಲಿ ಅಗತ್ಯ ಜೀವನಾವಶ್ಯಕ ಸಾಮಾಗ್ರಿ ತಲುಪಿಸಬೇಕು ಎಂದು ಒತ್ತಾಯಿಸಿದರು.

ಅಲ್ಲಿನ ಜನರಿಗೆ ಆಹಾರ ಸಾಮಾಗ್ರಿಗಳು ತಲುಪಬೇಕು. ಅಲ್ಲಿ ಮೂಲ ಸೌಲಭ್ಯಗಳ ಕೊರತೆ ಇದೆ. ಸೂಕ್ತ ವ್ಯವಸ್ಥೆ ಕಲ್ಪಿಸಬೇಕು  ಮನವಿಯಲ್ಲಿ ಆಗ್ರಹಿಸಿದರು.

ಹಾಪ್‌ಕಾಮ್ಸ್‌ ನಿರ್ದೇಶಕ ವಿಜಯಕುಮಾರ್, ಜಗದೀಶ್, ಮಂಜುನಾಥ್, ರಮೇಶ್, ಶಶಿ ಮನವಿ ಸಲ್ಲಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.