ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವಮೊಗ್ಗ: ರೋಸ್ಟರ್‌ ಪದ್ಧತಿ ಅನುಸರಿಸಲು ಆಗ್ರಹ

ಪದವಿಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ ಮನವಿ
Last Updated 28 ಮೇ 2022, 3:53 IST
ಅಕ್ಷರ ಗಾತ್ರ

ಶಿವಮೊಗ್ಗ: ರೋಸ್ಟರ್ ಪದ್ಧತಿ ಅನುಸರಿಸದೇ ಪಿಯು ಪ್ರವೇಶ ನೀಡುತ್ತಿರುವ ಶಿಕ್ಷಣ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಶುಕ್ರವಾರ ಎನ್‌ಎಸ್‌ಯುಐ ವತಿಯಿಂದ ಪದವಿಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ರಾಜ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಿದ್ದು, ಪಿಯು ಪ್ರವೇಶಕ್ಕೆ ವಿದ್ಯಾರ್ಥಿಗಳು ಪೋಷಕರು ಮುಂದಾಗಿದ್ದಾರೆ. ಜಿಲ್ಲೆಯಲ್ಲಿ ಬಹುತೇಕ ಖಾಸಗಿ ಕಾಲೇಜುಗಳಲ್ಲಿ ಸರ್ಕಾರದ ರೋಸ್ಟರ್ ಪದ್ಧತಿ ಅನುಸರಿಸದೇ ಪ್ರವೇಶ ನೀಡಲಾಗುತ್ತಿದೆ ಎಂದು ಪ್ರತಿಭಟನಕಾರರು ದೂರಿದರು.

ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ದೃಷ್ಟಿಯಿಂದ ಶಿಕ್ಷಣ ಇಲಾಖೆ ರೋಸ್ಟರ್ ಪದ್ಧತಿಯನ್ನು ಜಾರಿಗೊಳಿಸಿತ್ತು. ಆದರೆ, ಈ ಬಾರಿ ಜಿಲ್ಲೆಯ ಬಹುತೇಕ ಖಾಸಗಿ ಕಾಲೇಜುಗಳು ಈ ಪದ್ಧತಿ ಅನುಸರಿಸದೇ ಹೆಚ್ಚು ಹಣ ಕೊಟ್ಟವರಿಗೆ ಸೀಟು ಕೊಡುತ್ತಿದ್ದು, ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳನ್ನು ಶಿಕ್ಷಣದಿಂದ ವಂಚಿತರನ್ನಾಗಿ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

ಕೂಡಲೇ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಇಂತಹ ಶಿಕ್ಷಣ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಬಡ ಮತ್ತು ಮಧ್ಯಮ ವರ್ಗದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಖಾಸಗಿ ಕಾಲೇಜುಗಳಲ್ಲಿ ಪ್ರವೇಶ ದೊರಕುವಂತೆ ನೋಡಿಕೊಳ್ಳಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಎನ್‌ಎಸ್‌ಯುಐ ಜಿಲ್ಲಾ ಅಧ್ಯಕ್ಷ ವಿಜಯ್, ನಗರ ಅಧ್ಯಕ್ಷ ಚರಣ್, ಗ್ರಾಮಾಂತರ ಅಧ್ಯಕ್ಷ ಹರ್ಷಿತ್ ಗೌಡ, ಗಿರೀಶ್, ಕಾಟಿಕೆರೆ ರವಿ, ಚಂದ್ರೋಜಿ ರಾವ್, ಸೂರಜ್, ಆಕಾಶ್, ತೌಫಿಕ್, ಅಭಿ, ಸಾಗರ್, ಚರಣ್, ದೀಕ್ಷಿತ್, ಪ್ರಮೋದ್, ಸಮರ್ಥ್, ಸೋನು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT