ಶಿವಮೊಗ್ಗ: ಇಲ್ಲಿನ ವೆಂಕಟೇಶನಗರ ನಿವಾಸಿ ನಿವೃತ್ತ ಶಿಕ್ಷಕಿ ನೀಲಮ್ಮ (73) ಕಾಲು ಜಾರಿ ಬಾವಿಗೆ ಬಿದ್ದು ಮೃತಪಟ್ಟಿದ್ದಾರೆ.
ನೀಲಮ್ಮ ವೆಂಕಟೇಶನಗರದ ಸಹೋದರನ ಮನೆಯಲ್ಲಿ ವಾಸವಾಗಿದ್ದರು. ಮನೆಯ ಕಾಂಪೌಂಡ್‌ನೊಳಗಿದ್ದ ಬಾವಿಗೆ ಅಳವಡಿಸಿದ್ದ ಮೋಟರ್ ಪರಿಶೀಲಿಸಲು ಹೋಗಿದ್ದಾಗ ಕಾಲುಜಾರಿ ಬಿದ್ದು ಮೃತಪಟ್ಟಿದ್ದಾರೆ. ಆಂಬುಲೆನ್ಸ್ ಚಾಲಕನ ನೆರವಿನಿಂದ ಅಗ್ನಿಶಾಮಕ ಸಿಬ್ಬಂದಿ ಮೃತದೇಹವನ್ನು ಮೇಲೆತ್ತಿದರು.
ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.