ಗುರುವಾರ, 8 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಂದಾಯ ಕಡತ ನಿರ್ವಹಣೆ: ಶಿವಮೊಗ್ಗ ಜಿಲ್ಲೆ ರಾಜ್ಯಕ್ಕೆ ಪ್ರಥಮ

Last Updated 17 ಸೆಪ್ಟೆಂಬರ್ 2021, 2:25 IST
ಅಕ್ಷರ ಗಾತ್ರ

ಶಿವಮೊಗ್ಗ: ಕಂದಾಯ ಇಲಾಖೆಯ ವಿವಿಧ ಕಡತಗಳ ವಿಲೇವಾರಿ ರ‍್ಯಾಂಕಿಂಗ್‌ನಲ್ಲಿ ಆಗಸ್ಟ್ ತಿಂಗಳಲ್ಲಿ ಶಿವಮೊಗ್ಗ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದೆ.

ಭೂ ಪರಿವರ್ತನೆ ಅರ್ಜಿಗಳು, ಉಪ ವಿಭಾಗದ ಆಯುಕ್ತರ ನ್ಯಾಯಾಲಯದ ಪ್ರಕರಣಗಳು, ಜಿಲ್ಲಾಧಿಕಾರಿ ನ್ಯಾಯಾಲಯದ ಪ್ರಕರಣಗಳ ವಿಲೇವಾರಿ, ಪಹಣಿ ತಿದ್ದುಪಡಿ ಹೀಗೆ ವಿವಿಧ ವಿಭಾಗಗಳಲ್ಲಿ ಕಡತಗಳ ವಿಲೇವಾರಿ ಪರಿಗಣಿಸಿ ಪ್ರತಿ ತಿಂಗಳು ರಾಜ್ಯಮಟ್ಟದಲ್ಲಿ ರ‍್ಯಾಂಕಿಂಗ್ ನೀಡಲಾಗುತ್ತದೆ.

‘ಜಿಲ್ಲಾಧಿಕಾರಿ ಕಚೇರಿಯಲ್ಲಿ ಸ್ವೀಕರಿಸುವ ಎಲ್ಲ ಅರ್ಜಿಗಳನ್ನು ಕಾಲಮಿತಿಯ ಒಳಗೆ ವಿಲೇವಾರಿ ಮಾಡಲು ಎಲ್ಲ ಶಾಖಾ ಮುಖ್ಯಸ್ಥರಿಗೆ ಸೂಚನೆ ನೀಡಲಾಗಿದೆ. ಎಲ್ಲರ ಸಹಕಾರದಿಂದ ತ್ವರಿತವಾಗಿ ಕಡತಗಳ ವಿಲೇವಾರಿ ಸಾಧ್ಯವಾಗಿದೆ. ಕಚೇರಿಗೆ ಬರುವ ಸಾರ್ವಜನಿಕರನ್ನು ಅಲೆದಾಡಿಸದೆ ಶೀಘ್ರ ಪೂರ್ಣಗೊಳಿಸಲು ಸೂಚಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದರು.

‘ಕಂದಾಯ ವಿಷಯಗಳಲ್ಲಿ ಶಿವಮೊಗ್ಗ ಜಿಲ್ಲೆ ಉತ್ತಮ ಸಾಧನೆ ಮಾಡಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿಕೊಂಡಿದೆ. ರೈತರಿಗೆ ಸಹಾಯವಾಗಲು ಪಹಣಿ ಪತ್ರಿಕೆಯ ಕಲಂ 3 ಮತ್ತು 9ರಲ್ಲಿನ ನ್ಯೂನತೆಗಳನ್ನು ಕಾಲಮಿತಿಯಲ್ಲಿ ತಿದ್ದುಪಡಿ ಮಾಡಲಾಗಿದೆ. ಕಂದಾಯ ವಿಷಯಗಳಲ್ಲಿ ಉತ್ತಮ ಸಾಧನೆ ಮಾಡಲಾಗಿದೆ’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಾಗೇಂದ್ರ ಎಫ್.ಹೊನ್ನಳ್ಳಿ ಎಂದು ಪ್ರತಿಕ್ರಿಯಿಸಿದರು.

ಪ್ರಸ್ತುತ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬಹುತೇಕ ಇ–ಆಫೀಸ್ ವ್ಯವಸ್ಥೆ ಅನುಷ್ಠಾನಗೊಳಿಸಲಾಗಿದೆ. ಸ್ವೀಕರಿಸಲಾಗುವ ಪ್ರತಿಯೊಂದು ಅರ್ಜಿಯನ್ನು ಅದೇ ದಿನ ಡಿಜಟಲೀಕರಣಗೊಳಿಸಲಾಗುತ್ತಿದೆ. ಇದು ಸಂಪೂರ್ಣ ಪಾರದರ್ಶಕ ವ್ಯವಸ್ಥೆ. ಕಡತಗಳ ವಿಲೇವಾರಿ ಸುಗಮವಾಗಲು ಸಾಧ್ಯವಾಗಿದೆ. ಸಾರ್ವಜನಿಕರ ಅರ್ಜಿಗಳ ತ್ವರಿತವಾಗಿ ವಿಲೇವಾರಿ ಮಾಡಲು ಇ–ಆಫೀಸ್ ವ್ಯವಸ್ಥೆ ಪೂರಕವಾಗಿದೆ ಎಂದು ವಿವರ ನೀಡಿದರು.

ಉಪ ವಿಭಾಗೀಯ ಆಯುಕ್ತರ ಕಚೇರಿ ಮತ್ತು ತಹಶೀಲ್ದಾರ್ ಕಚೇರಿಯಲ್ಲಿ ಸಹ ಇ–ಆಫೀಸ್ ವ್ಯವಸ್ಥೆಯನ್ನು ಹಂತ ಹಂತವಾಗಿ ಅನುಷ್ಠಾನಗೊಳಿಸಲಾಗುತ್ತಿದೆ. ಮುಂದಿನ ಹಂತದಲ್ಲಿ ಇಡೀ ಕಂದಾಯ ಇಲಾಖೆಯನ್ನು ಇ–ಆಫೀಸ್ ಮೂಲಕ ಪರಸ್ಪರ ಜೋಡಿಸಲಾಗುವುದು. ಇದರಿಂದ ಸಾರ್ವಜನಿಕರು ಕಚೇರಿಗಳಿಗೆ ಅಲೆದಾಡುವುದು ತಪ್ಪಲಿದೆ ಎಂದರು.

ಸಾಮಾಜಿಕ ಭದ್ರತಾ ಯೋಜನೆಗಳ ಅನುಷ್ಠಾನ, ಗ್ರಾಮ ಪಂಚಾಯತಿ ಮಟ್ಟದಲ್ಲಿ ಘನತ್ಯಾಜ್ಯ ವಸ್ತುಗಳ ವಿಲೇವಾರಿ ಘಟಕಗಳಿಗೆ, ಸ್ಮಶಾನಗಳಿಗೆ ಭೂಮಿ ಗುರುತಿಸುವ ಪ್ರಕ್ರಿಯೆ ಚುರುಕುಗೊಳಿಸಲಾಗಿದೆ ಎಂದು ಮಾಹಿತಿ ನೀಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT