ರಿಪ್ಪನ್ಪೇಟೆ: ಭಾರತೀಯ ಸೇನೆಯಲ್ಲಿ 36 ವರ್ಷಗಳ ಕಾಲ ಸುದೀರ್ಘ ಸೇವೆ ಸಲ್ಲಿಸಿ ಸ್ವಯಂ ನಿವೃತ್ತಿ ಪಡೆದು ಹುಟ್ಟೂರಿಗೆ ಮರಳಿದ ಯೋಧ ಎ. ಕುಮಾರ್ ಅವರನ್ನು ಸ್ಥಳೀಯರು ಅದ್ದೂರಿಯಾಗಿ ಸ್ವಾಗತಿಸಿದರು.

ದೇಶದ ಗಡಿ ಪ್ರದೇಶಗಳಲ್ಲಿ ಎ. ಕುಮಾರ್ ಅವರೊಂದಿಗೆ ಅವರ ಪತ್ನಿ ಪದ್ಮಾ ಕುಮಾರ್ ಕೂಡ ಈ ಹಿಂದೆ ಸೈನ್ಯದಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಈ ದಂಪತಿಯ ಅಪೂರ್ವ ದೇಶ ಸೇವೆ ಹಾಗೂ ಕರ್ತವ್ಯ ನಿಷ್ಠೆಯನ್ನು ಸ್ಮರಿಸಿ ನಾಗರಿಕರು ಹಾಗೂ ವಿವಿಧ ಸಂಘ ಸಂಸ್ಥೆಗಳ ವತಿಯಿಂದ ಗೌರವಿಸಲಾಯಿತು.

ನಿವೃತ್ತ ಯೋಧ ದಂಪತಿಯನ್ನು ಶಿವಮೊಗ್ಗ ರಸ್ತೆಯ ಸಿದ್ದಪ್ಪನ ಗುಡಿಯಿಂದ ತೆರೆದ ವಾಹನದಲ್ಲಿ ಮೆರವಣಿಗೆಯ ಮೂಲಕ ಸಿದ್ದಿವಿನಾಯಕ ದೇವಸ್ಥಾನಕ್ಕೆ ಕರೆತರಲಾಯಿತು. ಅಲ್ಲಿ ವಿಶೇಷ ಪೂಜೆ ಸಲ್ಲಿಸಿ, ನಂತರ ವಿನಾಯಕ ವೃತ್ತದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದರು.

ಕಾರ್ಯಕ್ರಮದಲ್ಲಿ ಊರಿನ ನಾಗರಿಕರು, ವಿವಿಧ ಸಂಘ– ಸಂಸ್ಥೆಗಳ ಮುಖಂಡರು, ಜಿಲ್ಲಾ ಹಾಗೂ ತಾಲ್ಲೂಕು ನಿವೃತ್ತ ಸೈನಿಕ ಸಂಘದ ಪದಾಧಿಕಾರಿಗಳು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260503-42-86464596

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.