ರಿಪ್ಪನ್ಪೇಟೆ: ‘ಇಲ್ಲಿನ ಕಲಾ ಕೌಸ್ತುಭ ಕನ್ನಡ ಸಂಘ, ಕನ್ನಡ ಸಾಹಿತ್ಯ ಪರಿಷತ್ ಹೋಬಳಿ ಘಟಕ ಹಾಗೂ ನಾಥ್ ಬಳಗದ ಸಂಯುಕ್ತ ಆಶ್ರಯದಲ್ಲಿ ಜೂನ್ 14ರಂದು ಮಲೆನಾಡಿನ ಭಾಗ್ಯಧಾರೆ ‘ಮುಂಗಾರು’ ಕವನ ವಾಚನ ಹಾಗೂ ಕವನ ಸಂಗ್ರಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದು ಕಸಾಪ ಗ್ರಾಮ ಘಟಕದ ಮಾಜಿ ಅಧ್ಯಕ್ಷ ರಾ.ಸೋಮಶೇಖರ ತಿಳಿಸಿದರು.

‘ಗ್ರಾಮೀಣ ಭಾಗದ ಯುವಕವಿ, ಯುವ ಕವಯತ್ರಿಯರನ್ನು ಪರಿಚಯಿಸುವ ನಿಟ್ಟಿನಲ್ಲಿ ಕವಿತೆ ವಾಚನ ಹಾಗೂ ಕವನ ಸಂಗ್ರಹಿಸಿ ಪುಸ್ತಕ ರೂಪದಲ್ಲಿ ಹೊರ ತರಲು ಚಿಂತನೆ ನಡೆಸಲಾಗಿದೆ’ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

‘ಹಿರಿಯ ಮತ್ತು ಕಿರಿಯ ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದ್ದು, ಕವನ ಸ್ವರಚಿತವಾಗಿರಬೇಕು. ಒಬ್ಬರಿಗೆ ಒಂದು ಕವನ ವಾಚಿಸಲು ಅವಕಾಶವಿದೆ’ ಎಂದರು.

‘ಜೂನ್ 14ರ ಶನಿವಾರ ಮಧ್ಯಾಹ್ನ 3ಕ್ಕೆ ಸಾಗರ ರಸ್ತೆಯ ಬಿಎಸ್ಎನ್ಎಲ್ ಕಚೇರಿ ಪಕ್ಕದ ಶ್ರೀರಾಮ ಮಂದಿರದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದ್ದು, ಆಸಕ್ತರು ಸ್ವರಚಿತ ಕವನವನ್ನು ಸಂಪೂರ್ಣ ವಿಳಾಸದೊಂದಿಗೆ ಜೂನ್ 10ರ ಒಳಗೆ ಸಂಘದ ಮುಖ್ಯಸ್ಥರಿಗೆ ತಲುಪಿಸಬೇಕು’ ಎಂದು ಹೇಳಿದರು.

ಹೆಚ್ಚಿನ ಮಾಹಿತಿಗಾಗಿ ಮೊ: 94487 26910, 94493 28741, 74830 21975ಗೆ ಸಂಪರ್ಕಿಸಬಹುದು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-42-264017343

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.