ರಿಪ್ಪನ್ಪೇಟೆ: ‘ಇಲ್ಲಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ ಸಂಘದ ಗೋದಾಮು ಆವರಣದಲ್ಲಿ ನೂತನವಾಗಿ ಕ್ಯಾಂಪ್ಕೋ ಅಡಿಕೆ ಖರೀದಿ ಕೇಂದ್ರದ ಗೋದಾಮು ತೆರೆಯಲಾಗುವುದು’ ಎಂದು ಸಂಘದ ಅಧ್ಯಕ್ಷ ಎಂ. ಪರಮೇಶ್ ‘ಪ್ರಜಾವಾಣಿ’ಗೆ ಮಾಹಿತಿ ನೀಡಿದರು.

ಮಾರ್ಚ್ 26ರಂದು (ಗುರುವಾರ) ಬೆಳಿಗ್ಗೆ 10ಗಂಟೆಗೆ ಶಿವಮೊಗ್ಗ ಜಿಲ್ಲಾ ಕೇಂದ್ರದ ಸಹಕಾರ ಬ್ಯಾಂಕ್ ಅಧ್ಯಕ್ಷ ಆರ್.ಎಂ. ಮಂಜುನಾಥ ಗೌಡ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸಹಕಾರಿ ಸಂಘದ ಅಧ್ಯಕ್ಷ ಎಂ.ಎಂ. ಪರಮೇಶ್ ಅಧ್ಯಕ್ಷತೆ ವಹಿಸಲಿದ್ದಾರೆ.

ವಿಶೇಷ ಆಹ್ವಾನಿತರಾಗಿ ಮಂಗಳೂರು ಕ್ಯಾಂಪ್ಕೋ ಅಧ್ಯಕ್ಷ ಸತೀಶ್ಚಂದ್ರ, ನಿರ್ದೇಶಕ ಎಚ್.ಎಂ. ರಾಘವೇಂದ್ರ ಭಾಗವಹಿಸುವರು. ತಳಲೆ ಸಹಕಾರಿ ಸಂಘದ ಅಧ್ಯಕ್ಷ ದಿನೇಶ್ ಗೌಡ, ಅಮೃತ ಸಹಕಾರಿ ಸಂಘದ ಅಧ್ಯಕ್ಷ ದಿನೇಶ್ ಬಂಡಿ, ಅರಸಾಳು ಸಹಕಾರಿ ಸಂಘದ ಅಧ್ಯಕ್ಷ ಕೀರ್ತಿರಾಜ್ ಗೌಡ, ರಿಪ್ಪನ್ಪೇಟೆ ಸಹಕಾರಿ ಸಂಘದ ಉಪಾಧ್ಯಕ್ಷ ಎಂ.ಪಿ. ರಾಜು ಸೇರಿ ಹಲವರು ಭಾಗವಹಿಸಲಿದ್ದಾರೆ.

ನೇತ್ರ ತಪಾಸಣಾ ಶಿಬಿರ: ಕ್ಯಾಂಪ್ಕೋ ಖರೀದಿ ಕೇಂದ್ರದ ಉದ್ಘಾಟನಾ ಸಮಾರಂಭದ ಅಂಗವಾಗಿ ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆವರೆಗೆ ಶಿವಮೊಗ್ಗದ ಐ ದೃಷ್ಟಿ ಕಣ್ಣಿನ ಆಸ್ಪತ್ರೆ ಸಹಯೋಗದಲ್ಲಿ ನೇತ್ರ ಉಚಿತ ತಪಾಸಣೆ ನಡೆಯಲಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260325-42-184378779

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.