ರಿಪ್ಪನ್ಪೇಟೆ: ಇಲ್ಲಿನ ಬರುವೆ ರಸ್ತೆಯ ಹಳೆ ಸಂತೇ ಮಾರ್ಕೆಟ್ ಪ್ರದೇಶದಲ್ಲಿ ಪಂಚಾಯಿತಿ ಅಧೀನದಲ್ಲಿರುವ ಸರ್ವೆ ನಂ. 43ರಲ್ಲಿನ ಜಾಗವನ್ನು ರಾತ್ರೋರಾತ್ರಿ ಒತ್ತುವರಿ ಮಾಡಲಾಗಿದ್ದು, ಇದನ್ನು ಗ್ರಾಮ ಪಂಚಾಯಿತಿ ವತಿಯಿಂದ ಶನಿವಾರ ತೆರವುಗೊಳಿಸಲಾಯಿತು.

1991ರಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ನೀಡಿರುವ ಹಕ್ಕುಪತ್ರ ನಮ್ಮ ಬಳಿ ಇದೆ ಎಂದು ಒತ್ತುವರಿದಾರರು ತೆರವಿಗೆ ವಿರೋಧ ವ್ಯಕ್ತಪಡಿಸಿದರು. ಈ ವೇಳೆ ಒತ್ತುವರಿದಾರರು, ಗ್ರಾಮ ಪಂಚಾಯಿತಿ ಸಿಬ್ಬಂದಿ ಮತ್ತು ಗ್ರಾ.ಪಂ. ಮಾಜಿ ಸದಸ್ಯರ ನಡುವೆ ಮಾತಿನ ಚಕಮಕಿ ನಡೆಯಿತು.

ಹಲ್ಲೆ ನಡೆಸಿರುವುದಾಗಿ ಹೇಳಿ ಎರಡು ಗುಂಪಿನವರೂ ಆಸ್ಪತ್ರೆಗೆ ದಾಖಲಾಗಿದ್ದು, ರಿಪ್ಪನ್ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ದೂರು ದಾಖಲಿಸಿದ್ದಾರೆ.

ಗ್ರಾ.ಪಂ. ಮಾಜಿ ಸದಸ್ಯರಾದ ನಿರೂಪ್ ಕುಮಾರ್, ಪ್ರಕಾಶ್ ಪಾಲೇಕರ್, ಮಲ್ಲಿಕಾರ್ಜುನ್, ಸುಂದರೇಶ್ ಹಾಗೂ ಸಿಬ್ಬಂದಿ ನಾಗೇಶ್ ಮೋರೆ, ರಾಜೇಶ್ ಸೇರಿದಂತೆ ಹಲವರು ಒತ್ತುವರಿ ತೆರವು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260323-42-162193366

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.