ಶಿವಮೊಗ್ಗ: ಭದ್ರಾವತಿ ತಾಲ್ಲೂಕಿನ ಮೂಡಲ ವಿಠಲಾಪುರದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಹಾಜರಾಗಬೇಕಿದ್ದ ವಿದ್ಯಾರ್ಥಿನಿ ಉಮೈ ಖುಲ್ಸುಂ (16) ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಜಂಬರಘಟ್ಟ ಗ್ರಾಮದ ಉಮೈ, ಸೋಮವಾರ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಹಾಜರಾಗಲು ಶಿವಮೊಗ್ಗದ ಸಂಬಂಧಿಕರ ಮನೆಗೆ ಭಾನುವಾರ ಸಂಜೆ ಹೊರಟಿದ್ದಳು.

ಮೂಡಲ ವಿಠಲಾಪುರದಲ್ಲಿ ಶಿವಮೊಗ್ಗಕ್ಕೆ ತೆರಳಲು ಬಸ್ ಹತ್ತಲೆಂದು ರಸ್ತೆ ದಾಟುವಾಗ ಚನ್ನಗಿರಿ ಕಡೆಯಿಂದ ಶಿವಮೊಗ್ಗ ಕಡೆಗೆ ತೆರಳುತ್ತಿದ್ದ ಇನ್ನೋವಾ ಕಾರು ಡಿಕ್ಕಿ ಹೊಡೆದಿದೆ. ಈ ವೇಳೆ ಬಾಲಕಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.

ಈ ಬಗ್ಗೆ ಹೊಳೆಹೊನ್ನೂರು ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.