ಶಿವಮೊಗ್ಗ: ಮಾಹಿತಿ ಹಕ್ಕು ಅಧಿನಿಯಮದಡಿ ಸಕಾಲದಲ್ಲಿ ಮಾಹಿತಿ ನೀಡದೇ ದಂಡ ಪಾವತಿ ಮಾಡದಿರುವ ಅಧಿಕಾರಿಗಳಿಗೆ ನಿವೃತ್ತಿಯ ನಂತರದ ಪಿಂಚಣಿ ಪಡೆಯಲು ಅಡಚಣೆ ಉಂಟಾಗಲಿದೆ ಎಂದು ರಾಜ್ಯ ಮಾಹಿತಿ ಆಯೋಗದ ಆಯುಕ್ತ ರುದ್ರಣ್ಣ ಹರ್ತಿಕೋಟೆ ಎಚ್ಚರಿಸಿದರು.

ನಗರದಲ್ಲಿ ಶನಿವಾರ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಸಾರ್ವಜನಿಕ ಮಾಹಿತಿ ಅಧಿಕಾರಿಗಳಿಗೆ ಮಾಹಿತಿ ಹಕ್ಕು ಕಾಯ್ದೆಯ ಕುರಿತು ಏರ್ಪಡಿಸಿದ್ದ ಕಾರ್ಯಾಗಾರ, ಜಾಗೃತಿ ಮತ್ತು ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ದಂಡನೆ ತಪ್ಪಿಸಿಕೊಳ್ಳಲು ಮಾಹಿತಿಹಕ್ಕು ಅಧಿನಿಯಮದಡಿ ಅರ್ಜಿದಾರರು ನಿಯಮಾವಳಿಯಂತೆ ಮಾಹಿತಿ ಕೋರಿ ಸಲ್ಲಿಸುವ ಅರ್ಜಿಗಳನ್ನು ನಿಗದಿತ ಕಾಲಮಿತಿಯೊಳಗಾಗಿ ವಿಲೇವಾರಿ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

‘ರಾಜ್ಯದಲ್ಲಿ ಮಾಹಿತಿ ಹಕ್ಕು ಕಾಯ್ದೆಯಡಿ ನಿಯಮ ಪಾಲಿಸದ ಹಾಗೂ ಅರ್ಜಿದಾರರಿಗೆ ಸಕಾಲದಲ್ಲಿ ಮಾಹಿತಿ ಒದಗಿಸದ 10,754 ಸಾರ್ವಜನಿಕ ಮಾಹಿತಿ ಅಧಿಕಾರಿಗಳಿಗೆ ₹ 10.20 ಕೋಟಿ ಮೊತ್ತದ ದಂಡ ವಿಧಿಸಲಾಗಿದೆ. ಈ ಪೈಕಿ 3080 ಅಧಿಕಾರಿಗಳಿಂದ ₹ 2.70 ಕೋಟಿ ದಂಡ ವಸೂಲಿ ಮಾಡಲಾಗಿದೆ’ ಎಂದು ತಿಳಿಸಿದರು.

ಶಿವಮೊಗ ಜಿಲ್ಲೆಯಲ್ಲಿ ಸಕಾಲದಲ್ಲಿ ಮಾಹಿತಿ ಒದಗಿಸದ 140 ಮಂದಿ ಅಧಿಕಾರಿಗಳಿಗೆ ₹ 14.40 ಲಕ್ಷ ಡಂಡ ವಿಧಿಸಲಾಗಿದ್ದು, ಆ ಪೈಕಿ 30 ಅಧಿಕಾರಿಗಳಿಂದ ₹ 4.12 ಲಕ್ಷ ದಂಡ ವಸೂಲಿ ಮಾಡಲಾಗಿದೆ.

ಮುಂದಿನ ದಿನಗಳಲ್ಲಿ ಅರ್ಜಿ ವಿಲೇಯಾಗದೇ ಉಳಿದಿರುವ ಹಾಗೂ ಮೇಲ್ಮನವಿ ಪ್ರಾಧಿಕಾರಕ್ಕೆ ಬರುವ ಅರ್ಜಿಗಳನ್ನು ಆಯಾ ಜಿಲ್ಲಾ ಕೇಂದ್ರದಲ್ಲಿಯೇ ವಿಲೇವಾರಿ ಮಾಡಲು ಚಿಂತನೆ ನಡೆಸಲಾಗಿದೆ ಎಂದು ಹೇಳಿದ ಅವರು, ವೈಯಕ್ತಿಕ ದ್ವೇಷ, ಕ್ಷುಲ್ಲಕ ಕಾರಣಕ್ಕೆ ಮಾಹಿತಿಹಕ್ಕು ಅಧಿನಿಯಮವನ್ನು ಸಾರ್ವಜನಿಕರು ಬಳಸಿಕೊಳ್ಳಬಾರದು. ಕಾಯ್ದೆಯ ದುರ್ಬಳಕೆ, ಅಧಿಕಾರಿಗಳ ವಿರುದ್ಧದ ಕ್ರಮಗಳಿಗಾಗಿ ಕಾಯ್ದೆಯನ್ನು ಬಳಸಿಕೊಳ್ಳುವಂತಾಗಬಾರದು ಎಂದು ಸಲಹೆ ನೀಡಿದರು.

ಅಧಿಕಾರಿಗಳು ತಮ್ಮ ಕಚೇರಿಯ ಅಧಿಕಾರಿ ಸಿಬ್ಬಂದಿಯ ವಿವರಗಳನ್ನೊಳಗೊಂಡ 4-1ಎ ಮತ್ತು 4-1ಬಿ ನಮೂನೆಗಳನ್ನು ಭರ್ತಿ ಮಾಡಿ ಪ್ರತಿ ವರ್ಷ ಇಲಾಖೆಯ ಜಾಲತಾಣದಲ್ಲಿ ಹಾಕಿ ಸಾರ್ವಜನಿಕ ಮಾಹಿತಿಗೆ ಲಭ್ಯವಿರುವಂತೆ ನೋಡಿಕೊಳ್ಳಬೇಕು. ಇದರಿಂದಾಗಿ ಇಲಾಖೆಗೆ ಮಾಹಿತಿ ಕೋರಿ ಬರುವ ಅರ್ಜಿಗಳು ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಲಿವೆ ಎಂದ ಅವರು, ಅರ್ಜಿದಾರರು ಅರ್ಜಿ ಸಲ್ಲಿಸಿದ 30 ದಿನಗಳೊಳಗಾಗಿ ಕಚೇರಿಯಲ್ಲಿ ಲಭ್ಯವಿರುವ ಮಾಹಿತಿ ಒದಗಿಸಬೇಕು ಎಂದು ಹೇಳಿದರು.

ಸಭೆಯಲ್ಲಿ ಎಸ್ಪಿ ಜಿ.ಕೆ.ಮಿಥುನ್ಕುಮಾರ್, ಸಿಇಒ ಎನ್. ಹೇಮಂತ್, ಎಡಿಸಿ ವಿ.ಅಭಿಷೇಕ್, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಸುಜಾತಾ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.