ಶುಕ್ರವಾರ, ಅಕ್ಟೋಬರ್ 7, 2022
24 °C

ದಸರಾ ಮಹಿಳಾ ಕ್ರೀಡಾಕೂಟಕ್ಕೆ ಚಾಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿವಮೊಗ್ಗ: ನಾಡಹಬ್ಬ ದಸರಾ ಪ್ರಯುಕ್ತ ಈ ಬಾರಿ ಮಹಿಳಾ ದಸರಾ ಅತ್ಯಂತ ಅದ್ಧೂರಿಯಿಂದ ನಾಲ್ಕು ದಿನಗಳ ಕಾಲ ಆಚರಿಸಲಾಗುತ್ತಿದೆ. ಹೀಗಾಗಿ ಶನಿವಾರ ನಗರದ ಎನ್ಇಎಸ್ ಮೈದಾನದಲ್ಲಿ ಮಹಿಳಾ ದಸರಾ ಕ್ರೀಡಾಕೂಟಕ್ಕೆ ಮಹಾನಗರ ಪಾಲಿಕೆ ಮೇಯರ್ ಸುನೀತಾ ಅಣ್ಣಪ್ಪ ಚಾಲನೆ ನೀಡಿದರು.

ವೇಗದ ನಡಿಗೆ ಸೇರಿದಂತೆ ಹಲವು ಕ್ರೀಡಾ ಸ್ಪರ್ಧೆಗಳಲ್ಲಿ ಪಾಲಿಕೆಯ ಮಹಿಳಾ ಸದಸ್ಯರು ಭಾಗವಹಿಸಿದ್ದರು.

ಶಿವಮೊಗ್ಗ ನಗರದ ವಿವಿಧ ಮಹಿಳಾ ಕ್ರೀಡಾಪಟುಗಳು ಈ ಸ್ಪರ್ಧೆಗಳಲ್ಲಿ ಭಾಗಿಯಾಗಿದ್ದರು. ಉಪ ಮೇಯರ್ ಗನ್ನಿ ಶಂಕರ್, ಮಹಿಳಾ ದಸರಾ ಸಮಿತಿ ಅಧ್ಯಕ್ಷೆ ರೇಖಾ ರಂಗನಾಥ್, ಪಾಲಿಕೆ ಸದಸ್ಯರಾದ ಎಚ್.ಸಿ. ಯೋಗೀಶ್, ಸುವರ್ಣಾ ಶಂಕರ್, ಧೀರರಾಜ್ ಹೊನ್ನವಿಲೆ, ಸುರೇಖಾ ಮುರಳೀಧರ್, ಅನಿತಾ ರವಿಶಂಕರ್, ಆರತಿ ಆ.ಮ. ಪ್ರಕಾಶ್, ಮಂಜುಳಾ ಶಿವಣ್ಣ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.