ಗುರುವಾರ , ಅಕ್ಟೋಬರ್ 28, 2021
18 °C

ಸದಾಶಿವ ಆಯೋಗ ವರದಿ ತಿರಸ್ಕಾರಕ್ಕೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ಸದಾಶಿವ ಆಯೋಗದ ವರದಿ ತಿರಸ್ಕರಿಸದಿದ್ದರೆ ರಾಜ್ಯದಾದ್ಯಂತ ಶಾಂತಿಯುತ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ನ್ಯಾ. ಸದಾಶಿವ ಆಯೋಗ ವಿರೋಧಿ ಹೋರಾಟ ಸಮಿತಿ ಗೌರವಾಧ್ಯಕ್ಷ ಚೂಡಾನಾಯ್ಕ್ ಎಚ್ಚರಿಸಿದರು.

‘ಸದಾಶಿವ ಆಯೋಗದ ವರದಿ ಅವೈಜ್ಞಾನಿಕ. ವರದಿ ತಿರಸ್ಕರಿಸದೆ ಎಲ್ಲ ಸರ್ಕಾರಗಳು ಪರಿಶಿಷ್ಟ ಜಾತಿಯ 99 ಸಮುದಾಯಗಳ ಮೇಲೆ ತೂಗುಗತ್ತಿ ಬೀಸುತ್ತಿವೆ. ಸಂವಿಧಾನ ಜಾರಿಯಾದ ಇಲ್ಲಿಯವರೆಗೂ ಪರಿಶಿಷ್ಟ ಜನಾಂಗದ 101 ಸಮುದಾಯಗಳು ಯಾವುದೇ ಭಿನ್ನಾಭಿಪ್ರಾಯವಿಲ್ಲದೇ ಜೀವನ ಸಾಗಿಸುತ್ತಾ ಬಂದಿವೆ. ಆದರೆ, ಸರ್ಕಾರ ಆಯೋಗ ನೇಮಕ ಮಾಡಿ ಸೋದರ ಸಮುದಾಯಗಳಲ್ಲಿ ಬಿರುಕು ಮೂಡಿಸಿದೆ’ ಎಂದು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.

‘ಇದು ಮೇಲ್ನೋಟಕ್ಕೆ ಆಯೋಗವು ಸಂಘ ಪರಿವಾರದ ಹತೋಟಿಯಲ್ಲಿ ವರದಿ ಮಾಡಿದೆ ಎಂಬುದು ತಿಳಿಯುತ್ತದೆ. ಇದರಿಂದ ಆಯೋಗದ ವರದಿ ಯಥಾವತ್ತಾಗಿ ಜಾರಿಗೊಳಿಸಲು ಸರ್ಕಾರಕ್ಕೆ ಒತ್ತಡ ಹೇರುತ್ತಿರುವ ಸಚಿವ ಗೋವಿಂದ ಕಾರಜೋಳ, ಕೇಂದ್ರ ಸಚಿವ ನಾರಾಯಣಸ್ವಾಮಿ ಅವರನ್ನು ಸರ್ಕಾರ ಹತೋಟಿಯಲ್ಲಿಡಬೇಕು’ ಎಂದು ಒತ್ತಾಯಿಸಿದರು.

ಸಮಿತಿ ಅಧ್ಯಕ್ಷ ಎಸ್. ಪ್ರಕಾಶ್, ಕಾರ್ಯಾಧ್ಯಕ್ಷ ಶಾಂತವೀರನಾಯ್ಕ್, ಮುಖಂಡರಾದ ಬಿ. ಜಗದೀಶ್, ಈರಾನಾಯ್ಕ್, ಚಂದ್ರಕುಮಾರ್, ಜನ್ನಾಪುರ ಮಂಜುನಾಥ್, ರೇಖ್ಯಾನಾಯ್ಕ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು