‘ಅರ್ಹ ಕಾರ್ಮಿಕರಿಗೆ ಮನೆಗಳ ಕೊಡಿಸಿ’
ಭದ್ರಾವತಿಯಲ್ಲಿ ಕಾಯಂ ಪೌರ ಕಾರ್ಮಿಕರಿಗೆ ಕಾಯ್ದಿರಿಸಿದ ಮನೆಗಳಲ್ಲಿ ಗುತ್ತಿಗೆ ಕಾರ್ಮಿಕರು ಅಕ್ರಮವಾಗಿ ವಾಸವಾಗಿರುವುದು ಗಮನಕ್ಕೆ ಬಂದಿದೆ. ಸಂಬಂಧಿಸಿದ ಸ್ಥಳೀಯ ಸಂಸ್ಥೆಯ ಅಧಿಕಾರಿಗಳು ಪೊಲೀಸ್ ರಕ್ಷಣೆಯೊಂದಿಗೆ ಸಮಗ್ರ ದಾಖಲೆಗಳ ಪರಿಶೀಲಿಸಿ ಅರ್ಹರು ವಾಸ ಮಾಡಲು ಮನೆಗಳನ್ನು ತೆರವು ಮಾಡಿಸಿಕೊಡಲು ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು. ಅಸುರಕ್ಷತೆ ಮತ್ತು ಅಪಾಯಕಾರಿ ಕಾರ್ಯದಲ್ಲಿ ತೊಡಗಿದ ಸಫಾಯಿ ಕರ್ಮಚಾರಿಗಳಿಗೆ ಅವರ ಕುಟುಂಬದ ಅವಲಂಬಿತರಿಗೆ ಕಡ್ಡಾಯವಾಗಿ ವಿಮೆ ವ್ಯಾಪ್ತಿಗೊಳಪಡಿಸಲು ಸಂಬಂಧಿಸಿದ ಪ್ರಾಧಿಕಾರಗಳು ಕ್ರಮ ಕೈಗೊಂಡು ಅವರ ಆರೋಗ್ಯ ರಕ್ಷಣೆಗೆ ಮುಂದಾಗುವಂತೆ ತಿಳಿಸಿದರು.