ಸಾಗರ: ‘ಪ್ರಸ್ತುತ ದಿನಗಳಲ್ಲಿ ಯುವ ಸಮೂಹದಲ್ಲಿ ಸಾಂಸ್ಕೃತಿಕ ಬರಡುತನ ಕಾಣುತ್ತಿದ್ದು, ಸಾಂಸ್ಕೃತಿಕ ಕ್ರಿಯಾಶೀಲತೆಯ ಮೂಲಕ ಅವುಗಳನ್ನು ನಿವಾರಿಸುವ ಕೆಲಸ ಆಗಬೇಕಿದೆ’ ಎಂದು ರಂಗಕರ್ಮಿ ಪ್ರಸನ್ನ ಹೇಳಿದರು.

ಇಲ್ಲಿನ ಕುಡುಪಲಿ ಸದಾನಂದ ಸ್ವರಾಲಯದಲ್ಲಿ ವೇದನಾದ ಪ್ರತಿಷ್ಠಾನ, ಸದ್ಗುರು ಹಿಂದೂಸ್ತಾನಿ ಸಂಗೀತ ವಿದ್ಯಾಲಯ ಶುಕ್ರವಾರ ಏರ್ಪಡಿಸಿದ್ದ ರಂಗ ಗೀತೆಗಳ ಗಾಯನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

‘ಸಮಾಜ ಈಗ ಒಡೆದ ಹಾಲಿನಂತಾಗಿದ್ದು, ವಿಷಮ ಪರಿಸ್ಥಿತಿ ನಿರ್ಮಾಣವಾಗಿದೆ. ಸಣ್ಣ ಸಣ್ಣ ಊರುಗಳಲ್ಲಿ ಸಾಂಸ್ಕೃತಿಕ ಅಭಿರುಚಿ ಮೂಡಿಸುವ ಮೂಲಕವೇ ಇಂತಹ ಪರಿಸ್ಥಿತಿಯನ್ನು ತಿಳಿಗೊಳಿಸುವ ಸಾಧ್ಯತೆ ಇದೆ’ ಎಂದು ಅಭಿಪ್ರಾಯಪಟ್ಟರು.

‘ಕೆ.ವಿ.ಸುಬ್ಬಣ್ಣ ಅವರು ಹೆಗ್ಗೋಡಿನಂತಹ ಸಣ್ಣ ಹಳ್ಳಿಯಲ್ಲಿ ನೀನಾಸಂ ಹುಟ್ಟು ಹಾಕಿದಾಗ ಅದು ದೊಡ್ಡ ಮಟ್ಟಕ್ಕೆ ಬೆಳೆಯುತ್ತದೆ ಎಂಬ ಕಲ್ಪನೆ ಯಾರಿಗೂ ಇರಲಿಲ್ಲ. ಈಗ ಅದರ ಮಹತ್ವ ಏನು ಎಂಬುದು ಗೊತ್ತಾಗುತ್ತಿದೆ. ಇಂತಹ ದೂರದರ್ಶಿತ್ವ ಈಗಿನ ತುರ್ತು ಅಗತ್ಯವಾಗಿದೆ’ ಎಂದು ತಿಳಿಸಿದರು.

‘ಮೊಬೈಲ್ ಗೀಳು ಯುವ ಸಮೂಹವನ್ನು ಕಾಡುತ್ತಿದೆ. ಸಂಗೀತ, ಸಾಹಿತ್ಯ, ರಂಗಭೂಮಿಯಂತಹ ಚಟುವಟಿಕೆಗಳಲ್ಲಿ ಅವರು ಸಕ್ರಿಯವಾಗಿ ತೊಡಗುವಂತೆ ಮಾಡಿದರೆ ಮಾತ್ರ ಸೃಜನಶೀಲ ವ್ಯಕ್ತಿತ್ವ ನಿರ್ಮಿಸಬಹುದು’ ಎಂದರು.

ಸಂಗೀತ ವಿದ್ವಾಂಸ ಪಂಡಿತ್ ಮೋಹನ್ ಹೆಗಡೆ ಹುಣಸೆಕೊಪ್ಪ ಅಧ್ಯಕ್ಷತೆ ವಹಿಸಿದ್ದರು. ಪ್ರಮುಖರಾದ ಎಚ್.ಎನ್. ನರಸಿಂಹಮೂರ್ತಿ, ವಸುಧಾ ಶರ್ಮ, ಶ್ರೀರಂಜಿನಿ, ಸಂವತ್ಸರ ಇದ್ದರು.

ವಿದ್ಯಾಲಯದ ವಿದ್ಯಾರ್ಥಿಗಳು ರಂಗ ಗೀತೆಗಳನ್ನು ಪ್ರಸ್ತುತಪಡಿಸಿದರು. ವಿದ್ವಾನ್ ನಿಖಿಲ್ ವಿ.ಕುಂಸಿ, ಅಜಯ ಹೆಗಡೆ ವರ್ಗಾಸರ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260419-42-1555012349

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.