ಸಾಗರ: ನಗರವ್ಯಾಪ್ತಿಯಲ್ಲಿ ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸದೆ, ಕಾರು ಚಾಲಕರು ಬೆಲ್ಟ್ ಧರಿಸದೆ ವಾಹನ ಚಲಾಯಿಸಿದರೆ ಐಟಿಎಂಎಸ್ ತಂತ್ರಜ್ಞಾನದ ಮೂಲಕ ವಾಹನ ಚಾಲಕರಿಗೆ ಫೋಟೋ ಸಮೇತ ದಂಡ ಪಾವತಿಸಲು ಮೊಬೈಲ್ ಫೋನ್ಗೆ ಸಂದೇಶ ಬರುತ್ತದೆ ಎಂದು ಎಎಸ್ಪಿ ಬೆನಕ ಪ್ರಸಾದ್ ತಿಳಿಸಿದ್ದಾರೆ.

ಹೆಲ್ಮೆಟ್, ಸೀಟ್ ಬೆಲ್ಟ್ ಧರಿಸದ ವಾಹನಗಳನ್ನು ಅಡ್ಡ ಹಾಕಿ ದಂಡ ವಿಧಿಸುವ ಪದ್ದತಿ ಈಗ ಇಲ್ಲ. ಬದಲಾಗಿ ಪೊಲೀಸ್ ಸಿಬ್ಬಂದಿ ಅಂತಹ ವಾಹನಗಳ ಫೋಟೋ ತೆಗೆದು ದಂಡ ಪಾವತಿಸುವಂತೆ ಸಂದೇಶ ಕಳುಹಿಸುತ್ತಾರೆ. ವಾಹನ ಸವಾರರು ದಂಡಕ್ಕೆ ಅವಕಾಶ ನೀಡದಂತೆ ಕಾನೂನು ಪಾಲಿಸಬೇಕು ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಮನವಿ ಮಾಡಿದ್ದಾರೆ.

ನಾಲ್ಕು ದಿನಗಳಲ್ಲಿ ಹೆಲ್ಮೆಟ್, ಸೀಟ್ ಬೆಲ್ಟ್ ಧರಿಸದ 500ಕ್ಕೂ ಹೆಚ್ಚು ವಾಹನ ಸವಾರರಿಗೆ ಐಟಿಎಂಎಸ್ ತಂತ್ರಜ್ಞಾನದ ಮೂಲಕ ದಂಡ ಪಾವತಿಸುವಂತೆ ನೋಟಿಸ್ ಕಳುಹಿಸಲಾಗಿದ್ದು, ಆನ್ಲೈನ್ ಮೂಲಕ ದಂಡ ಪಾವತಿಸಬಹುದು. ಇಲ್ಲದಿದ್ದಲ್ಲಿ ಠಾಣೆಗೆ ಆಗಮಿಸಿ ದಂಡ ಕಟ್ಟಬಹುದು ಎಂದರು.

ಸಾಗರ ನಗರ ಮತ್ತು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದುಬಾರಿ ವಾಹನಗಳಲ್ಲಿ ಗೋವಿನ ಅಕ್ರಮ ಸಾಗಾಣಿಕೆ ಮಾಡುತ್ತಿರುವವರ ವಿರುದ್ದ ಐದು ಪ್ರಕರಣಗಳನ್ನು ದಾಖಲಿಸಲಾಗಿದೆ. ಭದ್ರಾವತಿಯ ಸಲ್ಮಾನ್ ಖಾನ್ ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ. ಇಂತಹ ಕೃತ್ಯ ಎಸಗುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಗಾಂಜಾ ಮಾರಾಟ ಹಾಗೂ ಗಾಂಜಾ ಸೇವನೆ ತಡೆಯತ್ತ ಇಲಾಖೆ ವಿಶೇಷ ಗಮನ ಹರಿಸಿದೆ. ಈ ಸಂಬಂಧ ಯಾವುದಾದರೂ ಮಾಹಿತಿ ಇದ್ದಲ್ಲಿ ಸಾರ್ವಜನಿಕರು ಮೊ. ಸಂ; 8277982900ಕ್ಕೆ ಕರೆ ಮಾಡಿ ತಿಳಿಸಬಹುದು. ಮಾಹಿತಿ ನೀಡಿದವರ ಹೆಸರನ್ನು ಗೌಪ್ಯವಾಗಿ ಇಡಲಾಗುವುದು ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.