ಸಾಗರ: ‘ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಮ್ಮೂರು ನಮ್ಮ ಕೆರೆ ಕಾರ್ಯಕ್ರಮದಡಿ ರಾಜ್ಯದಾದ್ಯಂತ 995 ಕೆರೆಗಳ ಹೂಳೆತ್ತಲಾಗಿದೆ. ಆ ಮೂಲಕ ಕೆರೆ ಅಭಿವೃದ್ಧಿಗೆ ಕೈಜೋಡಿಸಲಾಗಿದೆ’ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಶಿರಸಿ ವಿಭಾಗದ ಜಿಲ್ಲಾ ನಿರ್ದೇಶಕ ದಿನೇಶ್ ಎಂ. ತಿಳಿಸಿದರು.

ತಾಲ್ಲೂಕಿನ ಉಳ್ಳೂರು ಗ್ರಾಮದಲ್ಲಿ ಈಚೆಗೆ ನಡೆದ ಕೆರೆ ಅಭಿವೃದ್ಧಿ ಕಾಮಗಾರಿಯ ಸಮಾಲೋಚನಾ ಸಭೆಯಲ್ಲಿ ಮಾತನಾಡಿದ ಅವರು, ‘ಅತ್ಯಂತ ಕಡಿಮೆ ವೆಚ್ಚದಲ್ಲಿ ಗ್ರಾಮಸ್ಥರ ಸಹಯೋಗ ಮತ್ತು ಸಹಭಾಗಿತ್ವದೊಂದಿಗೆ ಕೆರೆ ಅಭಿವೃದ್ಧಿಗೊಳಿಸುವುದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಂಕಲ್ಪವಾಗಿದೆ’ ಎಂದರು.

‘ಕೆರೆ ಹೂಳೆತ್ತುವ ಕಾಮಗಾರಿ ಕೈಗೊಳ್ಳುವ ಮುನ್ನ ಕೆರೆಯನ್ನು ಸರ್ವೆ ಮಾಡಿ ಗಡಿ ಗುರುತು ಮಾಡುವುದು ಪ್ರಮುಖವಾದ ಸಂಗತಿಯಾಗಿದೆ. ನಂತರ ಕೆರೆ ಸುತ್ತ ಏರಿ ನಿರ್ಮಿಸಲಾಗುವುದು. ಉಳ್ಳೂರು ಗ್ರಾಮದ ಕೆರೆ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿದ್ದು, ವಿಶಾಲವಾಗಿರುವ ಇದರ ಅಭಿವೃದ್ಧಿ ಕಾಮಗಾರಿ ಯಶಸ್ವಿಯಾಗಿ ನಡೆದರೆ ಉಳ್ಳೂರು ಹಾಗೂ ಸುತ್ತಮುತ್ತಲ ಗ್ರಾಮಗಳ ಕೃಷಿಭೂಮಿಗೆ ನೀರಿನ ಕೊರತೆ ನೀಗುತ್ತದೆ. ಜೊತೆಗೆ ಕುಡಿಯುವ ನೀರಿನ ತೆರೆದ ಬಾವಿಗಳಲ್ಲಿ ಅಂತರ್ಜಲ ಪ್ರಮಾಣ ಹೆಚ್ಚುತ್ತದೆ’ ಎಂದರು.

ಕೆರೆ ಅಭಿವೃದ್ಧಿ ಕಾಮಗಾರಿಯನ್ನು ಯಶಸ್ವಿಯಾಗಿ ಕೈಗೊಳ್ಳುವ ನಿಟ್ಟಿನಲ್ಲಿ ನೂತನ ಸಮಿತಿಯನ್ನು ವಸೀಂ ಉಳ್ಳೂರು ಅವರ ಅಧ್ಯಕ್ಷತೆಯಲ್ಲಿ ರಚಿಸಲಾಯಿತು. ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಶ್ರೀಮತಿ ಹೆಗಡೆ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಇಂದಿರಾ ಜ್ಯೋತಿ, ಪ್ರಮುಖರಾದ ತಿರುಮಲ, ರಂಗನಾಥ್, ಜಗನ್ನಾಥ್, ಅನಿತಾ, ಕೆರಿಯಪ್ಪ, ಚಂದ್ರಶೇಖರ್, ಸೋಮಶೇಖರ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-42-1219556869

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.