SAGARA

ಸಾಗರ: ದೇವಸ್ಥಾನಕ್ಕೆ ಭಕ್ತರು ನೀಡುವ ಹಣ ಸದ್ವಿನಿಯೋಗವಾಗುವಂತೆ ನೋಡಿಕೊಳ್ಳುವುದು ಆಯಾ ದೇವಸ್ಥಾನಗಳ ಆಡಳಿತ ಸಮಿತಿಗಳ ಪ್ರಮುಖ ಜವಾಬ್ದಾರಿಯಾಗಿದೆ ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಎಚ್. ಹಾಲಪ್ಪ ಹರತಾಳು ಹೇಳಿದರು.

ಇಲ್ಲಿನ ಮಾರಿಕಾಂಬಾ ದೇವಸ್ಥಾನದ ನ್ಯಾಸ ಪ್ರತಿಷ್ಠಾನಕ್ಕೆ ನೂತನವಾಗಿ ಆಯ್ಕೆಯಾಗಿರುವ ನಿರ್ದೇಶಕರನ್ನು ಶನಿವಾರ ಅಭಿನಂದಿಸಿ ಮಾತನಾಡಿದರು.

ಕರ್ನಾಟಕದ ಅತೀ ದೊಡ್ಡ ಜಾತ್ರೆಗಳಲ್ಲಿ ಒಂದು ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಮಾರಿಕಾಂಬಾ ಜಾತ್ರೆಗೆ ವಿಶಿಷ್ಟವಾದ ಇತಿಹಾಸವಿದೆ. ಈ ಊರಿನ ಅನೇಕ ಗಣ್ಯರು ದೇವಸ್ಥಾನವನ್ನು, ಜಾತ್ರಾ ಮಹೋತ್ಸವವನ್ನು ಕಟ್ಟಿ ಬೆಳೆಸುವಲ್ಲಿ ವಿಶೇಷ ಕೊಡುಗೆ ನೀಡಿದ್ದಾರೆ ಎಂಬುದನ್ನು ನೆನಪಿಸಿದರು.

ಇರಾನ್–ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ವ್ಯತಿರಿಕ್ತ ಪರಿಣಾಮ ಭಾರತದ ಮೇಲೆ ಆಗುತ್ತಿದೆ. ಶೀಘ್ರವಾಗಿ ಯುದ್ಧ ಕೊನೆಗೊಂಡು ಶಾಂತಿ ನೆಲೆಸಲಿ ಎಂದು ಮಾರಿಕಾಂಬಾ ದೇವಿಯಲ್ಲಿ ಪ್ರಾರ್ಥಿಸುವುದಾಗಿ ಅವರು ಹೇಳಿದರು.

ಮಾರಿಕಾಂಬಾ ದೇವಿ ನ್ಯಾಸ ಪ್ರತಿಷ್ಠಾನದ ಅಧ್ಯಕ್ಷ ಎಂ. ನಾಗರಾಜ್, ಉಪಾಧ್ಯಕ್ಷ ಆರ್. ಶ್ರೀನಿವಾಸ್, ಪ್ರಧಾನ ಕಾರ್ಯದರ್ಶಿ ಎಂ.ಡಿ. ಆನಂದ್, ಖಜಾಂಚಿ ವಿ. ಶಂಕರ್, ಕಾರ್ಯದರ್ಶಿಗಳಾದ ವಿ. ಗುರು, ಪುರುಷೋತ್ತಮ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260330-42-191901674

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.