ಸಾಗರ: ‘ಮಾಹಿತಿ ಹಕ್ಕು ಕಾಯ್ದೆಯನ್ನು ಸಮಾಜದ ಒಳಿತಿಗಾಗಿ ಬಳಸಬೇಕೇ ಹೊರತು ಅದರ ದುರುಪಯೋಗ ಸಲ್ಲದು’ ಎಂದು ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆಯ ತಾಲ್ಲೂಕು ಘಟಕದ ಅಧ್ಯಕ್ಷ ಆನಂದ ಮೇಸ್ತ್ರಿ ಹೇಳಿದರು.

ಇಲ್ಲಿನ ಡಿಎಸ್ಎಸ್ ಕಾರ್ಯಾಲಯದಲ್ಲಿ ಈಚೆಗೆ ನಡೆದ ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆಯ ತಾಲ್ಲೂಕು ಶಾಖೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.

‘ಭ್ರಷ್ಟಾಚಾರವನ್ನು ತಡೆಯಲು, ನೊಂದವರಿಗೆ ನ್ಯಾಯ ಒದಗಿಸಲು, ಅಕ್ರಮಗಳನ್ನು ಬಯಲಿಗೆಳೆಯಲು ಮಾಹಿತಿ ಹಕ್ಕು ಕಾಯ್ದೆಯನ್ನು ಅಸ್ತ್ರವಾಗಿ ಬಳಸಬೇಕು. ಈ ಮೂಲಕ ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು’ ಎಂದರು.

ಸಂಘಟನೆಯ ಜಿಲ್ಲಾ ಮಾಧ್ಯಮ ಸಲಹೆಗಾರ ವೆಂಕಟೇಶ್ ಸಿ. ಮಾಹಿತಿ ಹಕ್ಕು ಕಾಯ್ದೆ ಕುರಿತು ಉಪನ್ಯಾಸ ನೀಡಿದರು.

ಪ್ರಮುಖರಾದ ರಮೇಶ್ ಕುಣಿಗಲ್, ಮೂರ್ತಿ, ಅಯೂಬ್, ಭಾಗ್ಯ ಪಿ.ಗೌಡ, ಮೋಹನ್ ಕುಮಾರ್, ಸ್ವಾಮಿರಾವ್, ವೀರಪ್ಪ ಸೆಟ್ಟಿಗಾರ ಇದ್ದರು. ಸಂಘಟನೆಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260421-42-1114069763

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.