ಸಾಗರ: ಇಲ್ಲಿನ ಸೇವಾ ಸಾಗರ ಸಂಸ್ಥೆಯು ಜೋಗ ರಸ್ತೆಯಲ್ಲಿ ನಿರ್ಮಿಸಿರುವ ನೂತನ ಕಟ್ಟಡವನ್ನು ಏ. 27ರಂದು ಬೆಳಿಗ್ಗೆ 10 ಕ್ಕೆ ನಡೆಯಲಿರುವ ಕಾರ್ಯಕ್ರಮದಲ್ಲಿ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಲೋಕಾರ್ಪಣೆ ಮಾಡಲಿದ್ದಾರೆ.

‘ವರದಹಳ್ಳಿ ಕ್ರಾಸ್ ಸಮೀಪದ ಲೋಹಿಯಾ ನಗರದಲ್ಲಿ ₹ 3 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ಸಿದ್ಧಗೊಂಡಿದೆ’ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಟ್ರಸ್ಟ್ ಅಧ್ಯಕ್ಷ ಅ.ಪು.ನಾರಾಯಣಪ್ಪ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಸಚಿವ ಮಧು ಬಂಗಾರಪ್ಪ, ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಗೋಪಾಲಕೃಷ್ಣ ಬೇಳೂರು, ಭಾರತಿ ಶೆಟ್ಟಿ, ಡಿ.ಎಸ್.ಅರುಣ್, ಶಾಂತಾರಾಮ್ ಸಿದ್ದಿ, ಎಸ್.ಎಲ್.ಭೋಜೇಗೌಡ, ಹರತಾಳು ಹಾಲಪ್ಪ ಸೇರಿದಂತೆ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ’ ಎಂದು ತಿಳಿಸಿದರು.

ಪ್ರಮುಖರಾದ ಯು.ಎಚ್.ರಾಮಪ್ಪ, ರವೀಂದ್ರ ಭಟ್, ಕೆ.ವಿ.ಪ್ರವೀಣ್, ಕವಲಕೋಡು ವೆಂಕಟೇಶ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260424-42-656991200

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.