ಸಾಗರ: ‘ನಗರ ವ್ಯಾಪ್ತಿಯಲ್ಲಿ ಹೆಚ್ಚುತ್ತಿರುವ ಬೀದಿ ನಾಯಿಗಳ ನಿಯಂತ್ರಣಕ್ಕಾಗಿ ನಗರಸಭೆ ವತಿಯಿಂದ ಸಂತಾನ ಶಕ್ತಿ ಹರಣ ಶಸ್ತ್ರಚಿಕಿತ್ಸೆ ನಡೆಸಲಾಗುತ್ತಿದೆ’ ಎಂದು ಪೌರಾಯುಕ್ತ ಎಚ್.ಕೆ. ನಾಗಪ್ಪ ತಿಳಿಸಿದರು.

‘ಒಂದು ವಾರದಿಂದ 1,500 ನಾಯಿಗಳಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಪ್ರಾಣಿ ಸಂತತಿ ನಿಯಂತ್ರಣ ಕಾಯ್ದೆ 2023ರ ನಿಯಮಗಳ ಪ್ರಕಾರ ಬೀದಿ ನಾಯಿಗಳನ್ನು ಹಿಡಿದು ರೇಬಿಸ್ ಚುಚ್ಚುಮದ್ದು ನೀಡಿ, ನಂತರ ಶಸ್ತ್ರಚಿಕಿತ್ಸೆ ಕೈಗೊಳ್ಳಲಾಗುತ್ತದೆ’ ಎಂದು ಮಾಹಿತಿ ನೀಡಿದರು.

‘2025–26ನೇ ಸಾಲಿನಲ್ಲಿ ಬೀದಿ ನಾಯಿಗಳ ಸಂತಾನ ಶಕ್ತಿ ಹರಣ ಶಸ್ತ್ರಚಿಕಿತ್ಸೆಗಾಗಿ ₹ 26 ಲಕ್ಷ ಖರ್ಚು ಮಾಡಲಾಗುತ್ತಿದೆ. ಮೊದಲ ಹಂತದಲ್ಲಿ ₹ 15 ಲಕ್ಷ ಬಳಸಲಾಗುತ್ತಿದೆ. ಒಂದು ನಾಯಿಯ ಚಿಕಿತ್ಸೆಗೆ ₹ 1,732 ವೆಚ್ಚ ತಗಲುತ್ತಿದೆ’ ಎಂದು ಹೇಳಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260327-42-299482241

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.