ಸಾಗರ: ಇಲ್ಲಿನ ಉಪವಿಭಾಗೀಯ ಸರ್ಕಾರಿ ಆಸ್ಪತ್ರೆಯನ್ನು 100 ಹಾಸಿಗೆ ಸಾಮರ್ಥ್ಯದಿಂದ 250 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯಾಗಿ ಪರಿವರ್ತಿಸಿ ಮೇಲ್ದರ್ಜೆಗೆ ಏರಿಸಲಾಗುವುದು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದ್ದಾರೆ.

ಇಲ್ಲಿನ ಪ್ರವಾಸಿ ಮಂದಿರದಲ್ಲಿ ಸೋಮವಾರ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ₹ 300 ಕೋಟಿ ವೆಚ್ಚದಲ್ಲಿ ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸುವ ಸಂಬಂಧ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ ಎಂದು ಹೇಳಿದರು.

ಆಸ್ಪತ್ರೆಯ ಹಿಂಭಾಗದಲ್ಲಿರುವ ವಸತಿ ಗೃಹಗಳು ಶಿಥಿಲಾವಸ್ಥೆಗೆ ತಲುಪಿವೆ. ಅವುಗಳನ್ನು ತೆರವುಗೊಳಿಸಿ ನೂತನ ಕಟ್ಟಡ ನಿರ್ಮಿಸಲಾಗುವುದು. ಪಕ್ಕದ ತಾಲ್ಲೂಕುಗಳಿಂದಲೂ ಇಲ್ಲಿನ ಆಸ್ಪತ್ರೆಗೆ ರೋಗಿಗಳು ಬರುವುದರಿಂದ ಆಧುನಿಕ ಸೌಲಭ್ಯಗಳನ್ನು ಕಲ್ಪಿಸಲು ಯೋಜನೆ ಸಿದ್ಧಪಡಿಸಲಾಗಿದೆ ಎಂದು ಮಾಹಿತಿ ನೀಡಿದರು.

‘ನಗರವ್ಯಾಪ್ತಿಯಲ್ಲಿ ₹ 70 ಕೋಟಿ ವೆಚ್ಚದಲ್ಲಿ ನಡೆದಿರುವ ಒಳಚರಂಡಿ ಕಾಮಗಾರಿ ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿದೆ. ಇದನ್ನು ಪೂರ್ಣಗೊಳಿಸಲು ಸರ್ಕಾರದಿಂದ ಹೆಚ್ಚುವರಿಯಾಗಿ ₹ 20 ಕೋಟಿ ಮಂಜೂರು ಮಾಡಿಸಿದ್ದೇನೆ’ ಎಂದು ತಿಳಿಸಿದರು.

ನಗರವ್ಯಾಪ್ತಿಯ ಜನರಿಗೆ ಸರಿಯಾದ ರೀತಿಯಲ್ಲಿ ನೀರು ಪೂರೈಕೆ ಮಾಡುವ ಸಂಬಂಧ ₹ 275 ಕೋಟಿ ವೆಚ್ಚದಲ್ಲಿ ಹೊಸದಾಗಿ ಪೈಪ್ಲೈನ್ ಅಳವಡಿಸಲಾಗುವುದು. ಈಗಿರುವ ಪೈಪ್ಲೈನ್ ಹಳೆಯದಾಗಿರುವುದರಿಂದ ಶರಾವತಿ ಹಿನ್ನೀರಿನಿಂದ ನೀರು ತರುತ್ತಿದ್ದರೂ ಸಮರ್ಪಕವಾಗಿ ಪೂರೈಸಲು ಸಾಧ್ಯವಾಗುತ್ತಿಲ್ಲ ಎಂದರು.

ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಶಿವಪ್ರಸಾದ್, ಸರ್ಕಾರಿ ಆಸ್ಪತ್ರೆ ವೈದ್ಯ ಕೆ. ಪರಪ್ಪ, ನೀರು, ನೈರ್ಮಲ್ಯ ಇಲಾಖೆ ಅಧಿಕಾರಿ ಗುರುಕೃಷ್ಣ ಶೆಣೈ, ಶಾಸಕರ ವಿಶೇಷ ಕರ್ತವ್ಯಾಧಿಕಾರಿ ಟಿ.ಪಿ. ರಮೇಶ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.