ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಳುಗಡೆ ಸಂತ್ರಸ್ತರಿಗೆ ವಂಚನೆ ಆರೋಪ: ಕ್ರಮಕ್ಕೆ ಒತ್ತಾಯ

Published 1 ಫೆಬ್ರುವರಿ 2024, 14:17 IST
Last Updated 1 ಫೆಬ್ರುವರಿ 2024, 14:17 IST
ಅಕ್ಷರ ಗಾತ್ರ

ಸಾಗರ: ತಾಲ್ಲೂಕಿನ ಮಲ್ಲಂದೂರು ಗ್ರಾಮದಲ್ಲಿ ಶರಾವತಿ ಮುಳುಗಡೆ ಸಂತ್ರಸ್ತರಿಗೆ ಮಂಜೂರಾಗಿರುವ ಭೂಮಿಯನ್ನು ಕೆಲವರು ನಕಲಿ ದಾಖಲೆ ಸೃಷ್ಟಿಸಿ ವಂಚಿಸುತ್ತಿದ್ದು, ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಇತರ ಸಂಘಟನೆಗಳ ಪ್ರಮುಖರು ಗುರುವಾರ ಉಪ ವಿಭಾಗಾಧಿಕಾರಿಗೆ ಮನವಿ ಸಲ್ಲಿಸಿದರು.

ಮಲ್ಲಂದೂರು ಗ್ರಾಮದ ಸರ್ವೆ ನಂ. 157ರಲ್ಲಿ ಶರಾವತಿ ಮುಳುಗಡೆ ಸಂತ್ರಸ್ತರಿಗೆ ಮಂಜೂರಾದ ಭೂಮಿಯನ್ನು ಕೆಲವರು ನಕಲಿ ದಾಖಲೆ ಸೃಷ್ಟಿಸುವ ಮೂಲಕ ಲಪಟಾಯಿಸಲು ಮುಂದಾಗಿದ್ದಾರೆ. ಇದು ಮುಳುಗಡೆ ಸಂತ್ರಸ್ತರಿಗೆ ಮಾಡುತ್ತಿರುವ ವಂಚನೆಯಾಗಿದೆ ಎಂದು ಪ್ರತಿಭಟನಕಾರರು ದೂರಿದರು.

‘ನಾಡಿಗೆ ಬೆಳಕು ನೀಡಲು ಸರ್ವಸ್ವವನ್ನೇ ತ್ಯಾಗ ಮಾಡಿರುವ ಮುಳುಗಡೆ ಸಂತ್ರಸ್ತರು ಭೂಮಿಯ ಹಕ್ಕು ಪಡೆಯಲು ಇಂದಿಗೂ ಹೋರಾಟ ನಡೆಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಸಂತ್ರಸ್ತರಿಗೆ ದೊರಕಬೇಕಾದ ಭೂಮಿಯ ಹಕ್ಕನ್ನು ನಕಲಿ ದಾಖಲೆ ಸೃಷ್ಟಿ ಮೂಲಕ ನಿರಾಕರಿಸುತ್ತಿರುವುದು ಖಂಡನೀಯ’ ಎಂದು ಪ್ರತಿಭಟನಕಾರರು ಪ್ರತಿಪಾದಿಸಿದರು.

‘ಮಲ್ಲಂದೂರು ಗ್ರಾಮದಲ್ಲಿ ಮುಳುಗಡೆ ಸಂತ್ರಸ್ತರಿಗೆ ಅನ್ಯಾಯವಾಗಿದೆ ಎಂಬುದಕ್ಕೆ ಸ್ಪಷ್ಟವಾದ ದಾಖಲೆಗಳಿವೆ. ಇದರಿಂದ ಬಡ ಜನರಿಗೆ ತೊಂದರೆಯಾಗುತ್ತಿದೆ. ನಿಜವಾದ ಸಂತ್ರಸ್ತರಿಗೆ ಭೂಮಿಯ ಹಕ್ಕು ದೊರಕಿಸಿಕೊಡುವಲ್ಲಿ ತಾಲ್ಲೂಕು ಆಡಳಿತ ಪ್ರಾಮಾಣಿಕ ಪ್ರಯತ್ನ ಮಾಡಬೇಕು’ ಎಂದು ಒತ್ತಾಯಿಸಿದರು.

ರೈತ ಸಂಘದ ರಾಜ್ಯ ಘಟಕದ ಉಪಾಧ್ಯಕ್ಷ ಶಿವಾನಂದ ಕುಗ್ವೆ, ತಾಲ್ಲೂಕು ಘಟಕದ ಅಧ್ಯಕ್ಷ ಎಂ.ಬಿ.ಮಂಜಪ್ಪ ಹಿರೇನೆಲ್ಲೂರು, ಪ್ರಮುಖರಾದ ಎನ್.ಸಿ. ಗಂಗಾಧರ, ಮುರಳಿಧರ, ನವೀನ್, ಲಲಿತಮ್ಮ, ಚನ್ನಪ್ಪ, ಅನಿಲ್, ತೀರ್ಥಪ್ಪ, ಗಣಪತಿ ಎಂ. ಲಕ್ಷ್ಮಣಪ್ಪ, ಪ್ರೇಮಕುಮಾರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT