ಬುಧವಾರ, 24 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಎನ್‌ಎಸ್ಎಸ್ ಶಿಬಿರಗಳಿಂದ ಶ್ರಮ ಸಂಸ್ಕೃತಿಯ ಮಹತ್ವದ ಅರಿವು

Published 3 ಜುಲೈ 2024, 15:55 IST
Last Updated 3 ಜುಲೈ 2024, 15:55 IST
ಅಕ್ಷರ ಗಾತ್ರ

ಸಾಗರ: ರಾಷ್ಟ್ರೀಯ ಯೋಜನೆ ಶಿಬಿರಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸುವುದರಿಂದ ಅವರಲ್ಲಿ ಶ್ರಮ ಸಂಸ್ಕೃತಿಯ ಬಗ್ಗೆ ಅರಿವು ಮೂಡುತ್ತದೆ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೇಖಾ ಅಣ್ಣಪ್ಪ ಹೇಳಿದರು.

ಇಲ್ಲಿನ ಇಂದಿರಾಗಾಂಧಿ ಸರ್ಕಾರಿ ಪ್ರಥಮದರ್ಜೆ ಮಹಿಳಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಘಟಕ ಶಿರವಾಳ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ವಾರ್ಷಿಕ ಶಿಬಿರವನ್ನು ಬುಧವಾರ ಉದ್ಘಾಟಿಸಿ ಅವರು ಮಾತನಾಡಿದರು.

ಗ್ರಾಮೀಣ ಬದುಕಿನ ಪರಿಚಯ ನಗರ ಪ್ರದೇಶದ ವಿದ್ಯಾರ್ಥಿಗಳಿಗೆ ಇಲ್ಲವಾಗಿದೆ. ಗ್ರಾಮೀಣ ಭಾಗದಲ್ಲಿ ಎನ್ಎಸ್ಎಸ್ ಶಿಬಿರ ನಡೆಯುವುದರಿಂದ ಗ್ರಾಮೀಣ ಬದುಕು ಹಾಗೂ ಅಲ್ಲಿನ ಸಂಸ್ಕೃತಿಯನ್ನು ಹತ್ತಿರದಿಂದ ನೋಡುವ ಅವಕಾಶ ಲಭ್ಯವಾಗುತ್ತದೆ ಎಂದು ಅವರು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ರಾಜೇಶ್ವರಿ ಎಚ್., ಎನ್ಎಸ್ಎಸ್ ಶಿಬಿರಗಳಿಂದ ವಿದ್ಯಾರ್ಥಿಗಳಲ್ಲಿ ಸಾಂಸ್ಕೃತಿಕ ಅಭಿರುಚಿ ಬೆಳೆಯುವ ಮೂಲಕ ಅವರ ವ್ಯಕ್ತಿತ್ವ ವಿಕಸನಗೊಳ್ಳುತ್ತದೆ ಎಂದರು.

ಪ್ರಮುಖರಾದ ಹರೀಶ್ ಬಿ.ಎಚ್., ತುಕಾರಾಂ ಶಿರವಾಳ, ಲಕ್ಷ್ಮಿ ಟಿ.ಜಿ. ಸತೀಶ್ ಟಿ. ತಳವಾರ, ಸುನಂದಾ, ಸರಸ್ವತಿ, ಮಧು ಮಾಲತಿ, ಸಂತೋಷ್ ಕುಮಾರ್, ಅರ್ಪಿತಾ ಪಾಟೀಲ್, ಮಹಾಬಲೇಶ್ವರ ಕೆ.ಎನ್. ಶಿವಾನಂದ ಭಟ್ , ಬಿ.ಲೋಕೇಶಪ್ಪ, ಸೋಮಶೇಖರ ಬಿ. ರಂಗನಾಥ್, ರಂಜನ್ , ಉಷಾ ಎನ್. ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT