ಸಾಗರ: ‘ಇಲ್ಲಿನ ನಗರಸಭೆಗೆ ಆಡಳಿತಾಧಿಕಾರಿಯಾಗಿ ನೇಮಕಗೊಂಡಿರುವ ಜಿಲ್ಲಾಧಿಕಾರಿ, ಆರು ತಿಂಗಳಲ್ಲಿ ಒಮ್ಮೆಯೂ ಭೇಟಿ ನೀಡಿ ಸಭೆ ನಡೆಸಿಲ್ಲ’ ಎಂದು ಪುರಸಭೆ ಮಾಜಿ ಅಧ್ಯಕ್ಷ ತೀ.ನ.ಶ್ರೀನಿವಾಸ್ ಆರೋಪಿಸಿದ್ದಾರೆ

‘ಶರಾವತಿ ನದಿ ಹಿನ್ನೀರಿನಿಂದ ಸಾಗರ ನಗರಕ್ಕೆ ಕುಡಿಯುವ ನೀರು ಪೂರೈಕೆಯಾಗುತ್ತಿದೆ. ಆದರೆ, ದಿನದ 24 ಗಂಟೆ ನೀರು ಪೂರೈಸುವ ಭರವಸೆ ಕೇವಲ ಕಾಗದದ ಮೇಲೆ ಉಳಿದಿದೆ. ಇಂತಹ ಗಂಭೀರ ವಿಷಯದ ಕುರಿತು ಆಡಳಿತಾಧಿಕಾರಿ ಗಮನ ಹರಿಸಬೇಕು’ ಎಂದು ಪ್ರಕಟಣೆ ಮೂಲಕ ಒತ್ತಾಯಿಸಿದ್ದಾರೆ.

‘ನಗರದ ಮಾರ್ಕೆಟ್ ರಸ್ತೆ ವಿಸ್ತರಣೆ ಕಾರ್ಯ ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿದೆ. ಅನೇಕ ಬಾರಿ ಜನಪ್ರತಿನಿಧಿಗಳು, ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಶೀಘ್ರವೇ ವಿಸ್ತರಣೆ ಕಾರ್ಯ ನಡೆಸುವುದಾಗಿ ಹೇಳಿದ್ದಾರೆ. ಆದರೆ ಇನ್ನೂ ಕೆಲಸ ಆಗಿಲ್ಲ’ ಎಂದು ದೂರಿದ್ದಾರೆ.

‘ನಗರವ್ಯಾಪ್ತಿಯಲ್ಲಿ ಒಳ ಚರಂಡಿ ಕಾಮಗಾರಿ ಆರಂಭಗೊಂಡು 15 ವರ್ಷ ಕಳೆದಿವೆ. ಇನ್ನೂ ಕಾಮಗಾರಿ ಪೂರ್ಣಗೊಂಡಿಲ್ಲ. ಕೆಲವೆಡೆ ಭೂಸ್ವಾಧೀನ ಪ್ರಕ್ರಿಯೆ ನಡೆಯದೆ ಯೋಜನೆ ಆಮೆಗತಿಯಲ್ಲಿ ಸಾಗುತ್ತಿದೆ’ ಎಂದು ಹೇಳಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260421-42-749308563

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.