ಸಾಗರ: ‘ನಗರ ವ್ಯಾಪ್ತಿಯ ವಿವಿಧ ವಾರ್ಡ್ಗಳ ಅಭಿವೃದ್ಧಿಗೆ ರಾಜ್ಯ ಸರ್ಕಾರದಿಂದ ಶಾಸಕರ ಅನುದಾನದಡಿ ₹5 ಕೋಟಿ, ಹೆಚ್ಚುವರಿಯಾಗಿ ₹ 2 ಕೋಟಿ ಮಂಜೂರಾಗಿದ್ದು, ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು’ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದರು.

ಇಲ್ಲಿನ ಜೋಸೆಫ್ ನಗರ ಬಡಾವಣೆಯಲ್ಲಿ ನಗರೋತ್ಥಾನ ಯೋಜನೆಯಡಿ ಅಭಿವೃದ್ಧಿ ಕಾಮಗಾರಿಗೆ ಮಂಗಳವಾರ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.

‘ಗಣಪತಿ ಕೆರೆ ಪಕ್ಕದ ಶಾಶ್ವತ ಧ್ವಜ ಸ್ತಂಭದ ಬಳಿ ₹2 ಕೋಟಿ ವೆಚ್ಚದಲ್ಲಿ ಉದ್ಯಾನ, ನಗರದ ನಾಲ್ಕು ದಿಕ್ಕುಗಳಲ್ಲಿ ಫುಡ್ ಕೋರ್ಟ್ ನಿರ್ಮಿಸಲಾಗುತ್ತಿದೆ’ ಎಂದರು.

‘ಈ ವರ್ಷ ಹಿಂದಿನ ವರ್ಷಗಳಿಗಿಂತಲೂ ಹೆಚ್ಚು ಬಿಸಿಲಿದೆ. ಕುಡಿಯುವ ನೀರಿನ ಕೊರತೆಯಾಗದಂತೆ ನಿಗಾ ವಹಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಸಾರ್ವಜನಿಕರು ನೀರನ್ನು ಮಿತವಾಗಿ ಬಳಸಬೇಕು’ ಎಂದು ಮನವಿ ಮಾಡಿದರು.

ನಗರಸಭೆ ಪೌರಾಯುಕ್ತ ಎಚ್.ಕೆ.ನಾಗಪ್ಪ, ಯೋಜನಾ ಪ್ರಾಧಿಕಾರದ ಸದಸ್ಯ ಐ.ಎನ್.ಸುರೇಶ್ ಬಾಬು, ಪ್ರಮುಖರಾದ ಮಧು ಮಾಲತಿ, ಮರಿಯಾ ಲೀಮಾ, ಗಣಪತಿ ಮಂಡಗಳಲೆ, ಡಿ.ದಿನೇಶ್, ಮೈಕೆಲ್ ಡಿಸೋಜ, ಮಹಾಬಲೇಶ್ವರ ಶೇಟ್, ಆರ್ಥರ್ ಗೋಮ್ಸ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-42-1696313649

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.