ಸಾಗರ: ‘ಅಂಗವಿಕಲರಿಗೆ ನೆರವಾಗುವ ಮೂಲಕ ಅವರಲ್ಲಿ ಆತ್ಮಸ್ಥೈರ್ಯ ತುಂಬುವುದು ಮಾನವೀಯ ಮೌಲ್ಯ ಎತ್ತಿ ಹಿಡಿಯುವ ಕೆಲಸವಾಗಿದೆ’ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.

ಇಲ್ಲಿನ ಶೃಂಗೇರಿ ಶಂಕರ ಮಠದಲ್ಲಿ ಲಯನ್ಸ್ ಸಂಸ್ಥೆಯು ಶಂಕರ ಮಠ, ಕೇಂದ್ರ ಸರ್ಕಾರದ ದಿವ್ಯಾಂಗ ವ್ಯಕ್ತಿಗಳ ಕೌಶಲಾಭಿವೃದ್ಧಿ ಪುನರ್ವಸತಿ ಮತ್ತು ಸಬಲೀಕರಣ ಇಲಾಖೆಯ ಸಂಯುಕ್ತ ಪ್ರಾದೇಶಿಕ ಕೇಂದ್ರದ ಸಹಯೋಗದಲ್ಲಿ ಸೋಮವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಅಂಗವಿಕಲರಿಗೆ ಸಾಧನ, ಸಲಕರಣೆ, ಉಪಕರಣಗಳನ್ನು ವಿತರಿಸಿ ಮಾತನಾಡಿದರು.

‘ಅಂಗವಿಕಲರ ಬಗ್ಗೆ ಅನುಕಂಪ ತೋರುವುದರಿಂದ ಯಾವುದೇ ಪ್ರಯೋಜನವಿಲ್ಲ. ಬದಲಾಗಿ ದೈಹಿಕವಾಗಿ ದುರ್ಬಲರಾಗಿರುವ ಅವರನ್ನು ಮಾನಸಿಕವಾಗಿ ಗಟ್ಟಿಗೊಳಿಸುವ ಕೆಲಸ ಪ್ರತಿಯೊಬ್ಬರಿಂದಲೂ ಆಗಬೇಕಿದೆ. ಈ ನಿಟ್ಟಿನಲ್ಲಿ ಲಯನ್ಸ್ ಸಂಸ್ಥೆಯ ಕಾರ್ಯ ಶ್ಲಾಘನೀಯ’ ಎಂದರು.

‘ಅಂಗವಿಕಲರ ಕಲ್ಯಾಣಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮತ್ತಷ್ಟು ಉಪಯುಕ್ತ ಯೋಜನೆಗಳನ್ನು ಜಾರಿಗೊಳಿಸುವ ಅವಶ್ಯಕತೆ ಇದೆ. ಇಲ್ಲಿನ ಲಯನ್ಸ್ ಸಂಸ್ಥೆ ಈ ಭಾಗದ 167 ಅಂಗವಿಕಲರಿಗೆ ₹ 1.27 ಕೋಟಿ ಮೌಲ್ಯದ ಸಲಕರಣೆಗಳನ್ನು ವಿತರಿಸುವ ಮೂಲಕ ಸಮಾಜಮುಖಿಯಾಗಿ ಹೆಜ್ಜೆ ಇಟ್ಟಿದೆ’ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.

ಗ್ಯಾರಂಟಿ ಅನುಷ್ಠಾನ ಸಮಿತಿ ತಾಲ್ಲೂಕು ಘಟಕದ ಅಧ್ಯಕ್ಷ ಬಿ.ಆರ್.ಜಯಂತ್, ಸಿಆರ್ಸಿ ಸಂಸ್ಥೆಯ ನಿರ್ದೇಶಕ ಮಾರುತಿ ಕೃಷ್ಣಗೌಡ, ಲಯನ್ಸ್ ಅಧ್ಯಕ್ಷ ಪ್ರಸನ್ನ ಟಿ, ಪ್ರಮುಖರಾದ ಅಶ್ವಿನಿಕುಮಾರ್, ಸ್ವಪ್ನ ಸುರೇಶ್, ಆರ್.ಜಿ.ಶ್ರೀನಿವಾಸ್ ಮೂರ್ತಿ, ಎಸ್.ಐ.ಬಿರಾದಾರ್, ನಗರಸಭೆ ಮಾಜಿ ಅಧ್ಯಕ್ಷ ಟಿ.ಡಿ.ಮೇಘರಾಜ್ ಮಾತನಾಡಿದರು.

ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಸುರೇಶ್, ಸುವರ್ಣ ನಾಯ್ಕ, ಟಿ.ವಿ.ಪಾಂಡುರಂಗ, ಈ.ನಾಗರಾಜ್, ಎಚ್.ಎಸ್.ಮಂಜಪ್ಪ, ಈಳಿ ಶ್ರೀಧರ್, ಅಶೋಕ್ ಬೇಳೂರು, ಆಲ್ಬರ್ಟ್ ವಿಕ್ಟರ್ ಫರ್ನಾಂಡಿಸ್, ಎಸ್.ಬಿ.ಮಹಾದೇವ್, ಸುಧೀರ್ ಕುಮಾರ್ ಶೆಟ್ಟಿ, ಕೆ.ಜಿ.ಗುರುಲಿಂಗಯ್ಯ, ಪ್ರಭಾಕರ್ ಜೈನ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-42-1343067563

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.