ಸಾಗರ: ಇಲ್ಲಿನ ಲಯನ್ಸ್ ಸಂಸ್ಥೆಯು ಅಂಗವಿಕಲರಿಗೆ ಸಾಧನಾ ಸಲಕರಣೆಗಳನ್ನು ವಿತರಿಸುತ್ತಿದ್ದು, ಈ ಸಂಬಂಧ ಮಾಹಿತಿ ಸಂಗ್ರಹ ಹಾಗೂ ಹೆಸರು ನೋಂದಣಿ ಕಾರ್ಯಕ್ರಮ ಏ.27 ರಂದು ಬೆಳಿಗ್ಗೆ 9.30ಕ್ಕೆ ನೆಹರೂ ಮೈದಾನದಲ್ಲಿರುವ ಲಯನ್ಸ್ ಭವನದಲ್ಲಿ ನಡೆಯಲಿದೆ.

ಶೃಂಗೇರಿ ಶಂಕರ ಮಠ, ದಿವ್ಯಾಂಗ ವ್ಯಕ್ತಿಗಳ ಕೌಶಲಾಭಿವೃದ್ಧಿ ಪುನರ್ವಸತಿ ಮತ್ತು ಸಬಲೀಕರಣ ಕೇಂದ್ರದ ಸಹಯೋಗದೊಂದಿಗೆ ಸಲಕರಣೆಗಳನ್ನು ವಿತರಿಸಲಾಗುತ್ತಿದೆ ಎಂದು ಲಯನ್ಸ್ ಅಧ್ಯಕ್ಷ ಪ್ರಸನ್ನ ಟಿ. ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

₹3 ಕೋಟಿ ವೆಚ್ಚದಲ್ಲಿ ಸಾಧನಾ ಸಲಕರಣೆಗಳನ್ನು ವಿತರಿಸಲು ತೀರ್ಮಾನಿಸಲಾಗಿದೆ. ಈಗಾಗಲೆ 266 ಅಂಗವಿಕಲರನ್ನು ಆರೋಗ್ಯ ಇಲಾಖೆಯ ಮೂಲಕ ಗುರುತಿಸಲಾಗಿದೆ. ನೋಂದಣಿಗೆ ಬರುವವರು ಆಧಾರ್ ಕಾರ್ಡ್, ಪಡಿತರ ಚೀಟಿ, ಯುಡಿಐಡಿ ಸಂಖ್ಯೆ, 4 ಪಾಸ್ ಪೋರ್ಟ್ ಅಳತೆಯ ಭಾವಚಿತ್ರಗಳನ್ನು ಕಡ್ಡಾಯವಾಗಿ ತರಬೇಕು ಎಂದು ಮಾಹಿತಿ ನೀಡಿದ್ದಾರೆ.

ಶ್ರವಣ ಸಾಧನ, ಎಲೆಕ್ಟ್ರಿಕ್ ತ್ರಿಚಕ್ರ ವಾಹನ, ಕೃತಕ ಕಾಲು, ಕೈ ಸೇರಿದಂತೆ ವಿವಿಧ ಸಾಧನಾ ಸಲಕರಣೆಗಳನ್ನು ವಿತರಿಸಲಾಗುವುದು ಎಂದು ತಿಳಿಸಿದರು.

ಲಯನ್ಸ್ ಸಂಸ್ಥೆಯ ಪ್ರಮುಖರಾದ ಅಶ್ವಿನಿಕುಮಾರ್, ಈಳಿ ಶ್ರೀಧರ್, ಈ.ನಾಗರಾಜ್, ಟಿ.ವಿ.ಪಾಂಡುರಂಗ, ಸುಧೀರ್ ಶೆಟ್ಟಿ, ಸುರೇಶ್ ಎನ್. ಗುರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-42-986351418

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.