ಸಾಗರ: ‘ಇಲ್ಲಿನ ಆರ್ಟಿಒ ಕಚೇರಿ ಆವರಣದಲ್ಲಿ ವಾಹನ ಚಾಲಕರಿಗೆ ಪರವಾನಗಿ ಪೂರ್ವ ಪರೀಕ್ಷೆ ನಡೆಸಲು₹ 5.65 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಟ್ರ್ಯಾಕ್ ನಿರ್ಮಾಣಗೊಳ್ಳುತ್ತಿದ್ದು, ಜುಲೈ ಮೊದಲ ವಾರದಲ್ಲಿ ಉದ್ಘಾಟನೆಗೊಳ್ಳಲಿದೆ’ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದ್ದಾರೆ.

ವಾಹನಗಳ ಸ್ವಯಂಚಾಲಿತ ಚಾಲನಾ ಪಥದ ಕಾಮಗಾರಿಯನ್ನು ಬುಧವಾರ ವೀಕ್ಷಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಈ ಮೊದಲು ಬೇರೆ ಬೇರೆ ಸ್ಥಳಗಳಲ್ಲಿ ವಾಹನ ಸವಾರರಿಗೆ ಚಾಲನಾ ಪರವಾನಗಿ ನೀಡುವ ಮುನ್ನ ಪರೀಕ್ಷೆ ನಡೆಸಲಾಗುತ್ತಿತ್ತು. ಇನ್ನು ಮುಂದೆ ಒಂದೇ ಸ್ಥಳದಲ್ಲಿ ಈ ಕಾರ್ಯ ನಡೆಯಲಿದೆ’ ಎಂದು ಮಾಹಿತಿ ನೀಡಿದರು.

‘ಜಿಲ್ಲೆಯಲ್ಲಿ ಶಿವಮೊಗ್ಗ ಹೊರತು ಪಡಿಸಿದರೆ ಈ ಮಾದರಿಯ ಸುಸಜ್ಜಿತ ಟ್ರ್ಯಾಕ್ ನಿರ್ಮಾಣಗೊಂಡಿರುವುದು ಸಾಗರದಲ್ಲಿ ಮಾತ್ರ. ಇದರ ಉದ್ಘಾಟನೆಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಆಹ್ವಾನ ನೀಡಲಾಗುವುದು’ ಎಂದು ತಿಳಿಸಿದರು.

‘ವಾಹನ ಅಪಘಾತಗಳ ಸಂಖ್ಯೆ ಹೆಚ್ಚುತ್ತಿರುವ ಕಾರಣ ಚಾಲನಾ ಪರವಾನಗಿ ಪೂರ್ವದ ಪರೀಕ್ಷೆಗಳನ್ನು ಅತ್ಯಂತ ಕಟ್ಟುನಿಟ್ಟಾಗಿ ನಡೆಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಈ ವಿಷಯದಲ್ಲಿ ಯಾವುದೇ ರಾಜಿ ಇಲ್ಲ’ ಎಂದು ಹೇಳಿದರು.

‘ನಗರದ ಮಾರ್ಕೆಟ್– ಸೊರಬ ರಸ್ತೆ ವಿಸ್ತರಣೆಗೆ ಸಂಬಂಧಿಸಿದಂತೆ ಅಲ್ಲಿನ ಸ್ಥಳೀಯ ನಿವಾಸಿಗಳಿಗೆ ಆಸ್ತಿ ತೆರವುಗೊಳಿಸಲು ಸಾಕಷ್ಟು ಕಾಲಾವಕಾಶ ನೀಡಲಾಗಿದೆ. ಇನ್ನು ಸಮಯ ನೀಡುವ ಪ್ರಶ್ನೆಯೇ ಇಲ್ಲ. ಪರಿಹಾರದ ಹಣಕ್ಕೆ ಕೊರತೆ ಇಲ್ಲದಿರುವಾಗ ವಿಸ್ತರಣೆ ಕಾರ್ಯ ವಿಳಂಬವಾಗುವುದನ್ನು ಸಹಿಸಲು ಸಾಧ್ಯವಿಲ್ಲ’ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

‘ಈಗ ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿರುವ ಉಪ ನೋಂದಣಾಧಿಕಾರಿ ಕಚೇರಿಯನ್ನು ತಾಲ್ಲೂಕು ಕಚೇರಿ ಸಮೀಪ ನೂತನ ಕಟ್ಟಡ ನಿರ್ಮಿಸಿ ಅಲ್ಲಿಗೆ ಸ್ಥಳಾಂತರಿಸಲಾಗುವುದು. ಕಚೇರಿಗೆ ಅಗತ್ಯವಿರುವಷ್ಟು ಸ್ಥಳಾವಕಾಶ ಕಲ್ಪಿಸಿಯೇ ನೂತನ ಕಟ್ಟಡ ನಿರ್ಮಿಸಲಾಗುವುದು’ ಎಂದು ತಿಳಿಸಿದರು.

ಸಾರಿಗೆ ಇಲಾಖೆ ಅಧಿಕಾರಿಗಳಾದ ವಾಸುದೇವ್, ಚೇತನ್ ಕುಮಾರ್, ವೀರೇಶ್, ಎಂಜಿನಿಯರ್ ಹರೀಶ್, ಶಾಸಕರ ವಿಶೇಷ ಕರ್ತವ್ಯಾಧಿಕಾರಿ ಟಿ.ಪಿ.ರಮೇಶ್, ಪ್ರಮುಖರಾದ ಕಲಸೆ ಚಂದ್ರಪ್ಪ, ಗಣಪತಿ ಮಂಡಗಳಲೆ, ಭಾವನಾ ಕೃಷ್ಣಮೂರ್ತಿ, ಸೈಯದ್ ಅನ್ವರ್, ನಾಗರಾಜ್ ಗುಡ್ಡಮನೆ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-42-1456557064

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.