ಸಾಗರ: ‘ಉತ್ತಮ ಶಿಕ್ಷಣದಿಂದ ಗಳಿಸುವ ಸಾಧನೆಗೆ ಎಂದಿಗೂ ಅಡ್ಡಿ, ಆತಂಕಗಳು ಇರುವುದಿಲ್ಲ’ ಎಂದು ಬೆಂಗಳೂರಿನ ಅನ್ ಲಾಗ್ ಡಿವೈಸಸ್ ಸಂಸ್ಥೆಯ ಎಂಜಿನಿಯರ್ ನಿಶಾಂತ್ ಹೇಳಿದರು.

ಇಲ್ಲಿನ ಎಂಡಿಎಫ್ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಬುಧವಾರ ನಡೆದ ವಿದ್ಯಾರ್ಥಿ ಮಾರ್ಗದರ್ಶನ ಕಾರ್ಯಕ್ರಮದಲ್ಲಿ ಮಾತನಾಡಿದರು.

‘ಪೋಷಕರಿಗಾಗಿ, ಉಪನ್ಯಾಸಕರಿಗಾಗಿ ಓದುತ್ತೇನೆ ಎನ್ನುವ ಬದಲು ನನ್ನ ಭವಿಷ್ಯಕ್ಕಾಗಿ, ಒಳಿತಿಗಾಗಿ ಶ್ರಮ ಪಡುತ್ತೇನೆ ಎಂಬ ಮನೋಭಾವ ವಿದ್ಯಾರ್ಥಿಗಳಿಗೆ ಬೇಕಾಗಿದೆ’ ಎಂದರು.

ಶೈಕ್ಷಣಿಕ ಸಾಧನೆಯ ಹಾದಿಯಲ್ಲಿ ಹಲವು ತೊಡಕುಗಳು ಎದುರಾಗುತ್ತವೆ. ಕೆಲವೊಮ್ಮೆ ಗೊಂದಲಗಳಿಗೆ ಯಾವ ಪರಿಹಾರ ಕಂಡುಕೊಳ್ಳಬೇಕು ಎಂಬ ಜಿಜ್ಞಾಸೆಯೂ ಇರುತ್ತದೆ. ಇಂತಹ ಸಂದರ್ಭಗಳಲ್ಲಿ ಸರಿಯಾದ ಹಾದಿಯನ್ನು ಕಂಡುಕೊಳ್ಳಬೇಕು’ ಎಂದು ಕಿವಿಮಾತು ಹೇಳಿದರು.

ಭಾರತ ಅಭಿವೃದ್ಧಿಶೀಲ ದೇಶವಾಗಿದ್ದು, ಉದ್ಯಮಗಳು ಬೆಳೆಯುತ್ತಿರುವುದರಿಂದ ಹೆಚ್ಚಿನ ಉದ್ಯೋಗಾವಕಾಶಗಳು ಸೃಷ್ಟಿಯಾಗುತ್ತಿವೆ. ಉದ್ಯೋಗಗಳಿಗೆ ಅಗತ್ಯವಾದ ಕೌಶಲಗಳನ್ನು ವಿದ್ಯಾರ್ಥಿಗಳು ಕಲಿತುಕೊಳ್ಳಬೇಕು ಎಂದು ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ಎಚ್.ಎಂ. ಶಿವಕುಮಾರ್ ಹೇಳಿದರು.

ಕಾಲೇಜಿನ ಪ್ರಾಂಶುಪಾಲ ಜಗದೀಶ್ ಎಂ. ಭಂಡಾರಿ, ಶ್ರೀಧರ ರಾವ್, ಸತ್ಯನಾರಾಯಣ ಎಂ.ಆರ್. ಇದ್ದರು. ಶಿಲ್ಪಾ ಸ್ವಾಗತಿಸಿ, ಸಾರಿಕಾ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-42-1849361494

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.