ಸಾಗರ: ‘ಯಾವ ಬೆಳೆಗೆ ಯಾವ ಪ್ರದೇಶದಲ್ಲಿ, ಯಾವ ಸಮಯದಲ್ಲಿ, ಯಾವ ರೀತಿಯ ರಸಗೊಬ್ಬರವನ್ನು ಯಾವ ಪ್ರಮಾಣದಲ್ಲಿ ಬಳಸಬೇಕು ಎಂಬ ಬಗ್ಗೆ ಪ್ರತಿಯೊಬ್ಬ ರೈತರು ಎಚ್ಚರ ವಹಿಸಬೇಕು’ ಎಂದು ಉಪವಿಭಾಗಾಧಿಕಾರಿ ವೀರೇಶ್ ಕುಮಾರ್ ಹೇಳಿದರು.

ಇಲ್ಲಿನ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಕೃಷಿ ಇಲಾಖೆ ಸಮತೋಲಿತ ರಸಗೊಬ್ಬರ ಬಳಕೆ ಕುರಿತು ಮಂಗಳವಾರ ಏರ್ಪಡಿಸಿದ್ದ ಅರಿವು ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

‘ಮಾರುಕಟ್ಟೆಯಲ್ಲಿ ವಿವಿಧ ಬಗೆಯ ಬಿತ್ತನೆ ಬೀಜ, ರಸಗೊಬ್ಬರಗಳು ಲಭ್ಯವಾಗುತ್ತಿರುವ ಈ ಕಾಲಘಟ್ಟದಲ್ಲಿ ಇವುಗಳ ಬಳಕೆಯ ಕುರಿತು ಕೃಷಿಕರಿಗೆ ಅರಿವು ಮೂಡಿಸುವ ಜವಾಬ್ದಾರಿ ಕೃಷಿ ಇಲಾಖೆಯ ಮೇಲಿದೆ’ ಎಂದು ಕಿವಿಮಾತು ಹೇಳಿದರು.

‘ಅಧಿಕ ಇಳುವರಿ ಪಡೆಯುವ ಜೊತೆಗೆ ಕೃಷಿಭೂಮಿ ಮಣ್ಣಿನ ಸಾರವನ್ನು ಉಳಿಸಿಕೊಳ್ಳಲು ಅನುಕೂಲವಾಗುವ ಗೊಬ್ಬರಗಳನ್ನು ಬಳಸುವುದು ಅಗತ್ಯವಾಗಿದೆ’ ಎಂದು ತಾಲ್ಲೂಕು ಪಂಚಾಯಿತಿ ಇಒ ಬಿ.ಎಲ್.ಶಿವಪ್ರಕಾಶ್ ತಿಳಿಸಿದರು.

ಕೃಷಿಕ ಸಮಾಜದ ಅಧ್ಯಕ್ಷ ವಿ.ವಿ.ಶ್ರೀಧರ್, ಕಾರ್ಯದರ್ಶಿ ಗಣಪತಿ ಹೆನಗೆರೆ, ಲೋಕೇಶ್, ರವೀಂದ್ರ, ಸಿ.ಆರ್.ವೀರಪ್ಪ, ಮಿಂಗನಗೌಡ, ವಿನಾಯಕ ರಾವ್ ಬೇಳೂರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260506-42-1276673725

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.