ಸಾಗರ: ‘ಮೀನು ಮಾರುಕಟ್ಟೆ ಹೊರತುಪಡಿಸಿ ನಗರದ ಯಾವುದೇ ಭಾಗದಲ್ಲಿ ಮೀನು ಮಾರಾಟಕ್ಕೆ ಅವಕಾಶ ನೀಡುವುದಿಲ್ಲ’ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದರು.

₹1.29 ಕೋಟಿ ವೆಚ್ಚದಲ್ಲಿ ಕೈಗೊಂಡಿರುವ ಇಲ್ಲಿನ ಮೀನು ಮಾರುಕಟ್ಟೆಯ ಮುಂದುವರಿದ ಕಾಮಗಾರಿಗೆ ಬುಧವಾರ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.

‘ನಗರದ ವಿವಿಧ ಬಡಾವಣೆಗಳ ವೃತ್ತಗಳಲ್ಲಿ ಕೆಲವರು ಮೀನು ಮಾರಾಟ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಮಾರಾಟ ಮಾಡಿದ ನಂತರ ಮೀನಿನ ತ್ಯಾಜ್ಯವನ್ನು ಹಾಗೆಯೆ ಬಿಟ್ಟು ತೆರಳುವುದರಿಂದ ಸ್ವಚ್ಛತೆಗೆ ಸಮಸ್ಯೆಯಾಗಿದೆ. ಆದ್ದರಿಂದ ಒಂದೇ ಸ್ಥಳದಲ್ಲಿ ಹಸಿ ಹಾಗೂ ಒಣ ಮೀನು ಮಾರಾಟಕ್ಕೆ ಅವಕಾಶ ಕಲ್ಪಿಸಲಾಗುವುದು’ ಎಂದು ಹೇಳಿದರು.

‘ಮೀನು ಮಾರುಕಟ್ಟೆಗೆ ಅಗತ್ಯವಿರುವ ಸಂಪರ್ಕ ರಸ್ತೆ ಅಭಿವೃದ್ಧಿಪಡಿಸಲಾಗುವುದು. ಮೀನು ಮಾರುಕಟ್ಟೆಯಲ್ಲಿ ಮಳಿಗೆ ಪಡೆದವರು ಸ್ವಚ್ಛತೆ ಕಾಪಾಡಿಕೊಳ್ಳದಿದ್ದರೆ ಮಳಿಗೆ ಹಿಂಪಡೆಯಲಾಗುವುದು’ ಎಂದು ಎಚ್ಚರಿಸಿದರು.

ಪ್ರಮುಖರಾದ ಐ.ಎನ್.ಸುರೇಶ್ ಬಾಬು, ಸೈಯದ್ ಜಾಕೀರ್, ಕೆ.ಹೊಳಿಯಪ್ಪ, ಮಕ್ಬುಲ್ ಅಹ್ಮದ್, ಕಲಸೆ ಚಂದ್ರಪ್ಪ, ಗಣಪತಿ ಮಂಡಗಳಲೆ, ಅಜೀಂ, ಹಂಜಾ, ರಶೀದ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-42-849274698

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.