ಸಾಗರ: ತಾಲ್ಲೂಕಿನ ಮಾಲ್ವೆ ಗ್ರಾಮದ ಸೊಪ್ಪಿನ ಬೆಟ್ಟದಲ್ಲಿ ಮರ ಅಕ್ರಮ ಕಡಿತಲೆಗೆ ಸಹಕಾರ ನೀಡಿದ ಆರೋಪದ ಮೇರೆಗೆ ವಲಯ ಅರಣ್ಯಾಧಿಕಾರಿ ಅಣ್ಣಪ್ಪ ಬಿ. ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.

ಮಾಲ್ವೆ ಗ್ರಾಮದ ಸರ್ವೆ ನಂ. 43ರ ಅರಣ್ಯ ಪ್ರದೇಶದಲ್ಲಿರುವ ನೆಡುತೋಪು, ಸೊಪ್ಪಿನ ಬೆಟ್ಟದಲ್ಲಿ ಜೆಸಿಬಿ ಯಂತ್ರಗಳನ್ನು ಬಳಸಿ ನಿಯಮ ಬಾಹಿರವಾಗಿ ರಸ್ತೆ ನಿರ್ಮಿಸಿ ಇಲಾಖೆ ಬೆಳೆಸಿದ ನೂರಾರು ಅಕೇಶಿಯಾ ಹಾಗೂ ಇತರ ಕಾಡು ಜಾತಿಯ ಮರಗಳನ್ನು ಅಕ್ರಮವಾಗಿ ಕಡಿದು ಸಾಗಾಟ ಮಾಡಿರುವ ಆರೋಪದ ಮೇರೆಗೆ ಅಣ್ಣಪ್ಪ ವಿರುದ್ಧ ಈ ಕ್ರಮ ಕೈಗೊಳ್ಳಲಾಗಿದೆ.

ಅಕ್ರಮ ಮರಕಡಿತಲೆ ಸಂಬಂಧ ಪ್ರಕರಣ ದಾಖಲಾಗಿದ್ದರೂ ಅಪರಾಧ ನಡೆದ ಸ್ಥಳ ಅರಣ್ಯದ ಹೊರಗಿದೆ ಎಂದು ನಮೂದಿಸಿ ಆರೋಪಿಗಳಿಗೆ ಅನುಕೂಲ ಮಾಡಿಕೊಡುವ ಕೃತ್ಯವನ್ನು ಅಣ್ಣಪ್ಪ ಎಸಗಿದ್ದಾರೆ ಎಂಬ ಆರೋಪದ ಮೇರೆಗೆ ಶಿಸ್ತು ಪ್ರಾಧಿಕಾರಿ ಹಾಗೂ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮೀನಾಕ್ಷಿ ನೇಗಿ ಅಮಾನತ್ತಿನ ಆದೇಶ ಹೊರಡಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-42-1775237386

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.