ಸಾಗರ: ‘ಮಲೆನಾಡಿನ ಜನರು ಅರಣ್ಯ ಇಲಾಖೆ ಎಂದರೆ ಬೆಚ್ಚಿ ಬೀಳುವಂತಾಗಿದೆ. ಹೀಗಿರುವಾಗ ಪರಿಭಾವಿತ ಅರಣ್ಯ ಪ್ರದೇಶದ ಸರ್ವೆಗೆ ಏಕಾಏಕಿ ಮುಂದಾಗದೆ ಗ್ರಾಮಸ್ಥರಿಗೆ, ಸ್ಥಳೀಯ ಜನಪ್ರತಿನಿಧಿಗಳಿಗೆ ಮೊದಲು ಮಾಹಿತಿ ನೀಡಬೇಕು’ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಒತ್ತಾಯಿಸಿದರು.

ಪರಿಭಾವಿತ ಅರಣ್ಯ ಪ್ರದೇಶ ಗುರುತಿಸುವ ಸಂಬಂಧ ಬುಧವಾರ ಇಲ್ಲಿನ ಪ್ರವಾಸಿ ಮಂದಿರದಲ್ಲಿ ನಡೆದ ಅಧಿಕಾರಿಗಳೊಂದಿಗಿನ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿದರು.

‘ಸುಪ್ರೀಂ ಕೋರ್ಟ್ನ ನಿರ್ದೇಶನದ ಮೇರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಪರಿಭಾವಿತ ಅರಣ್ಯ ಪ್ರದೇಶವನ್ನು ಗುರುತಿಸಲು ಮುಂದಾಗಿದ್ದಾರೆ. ಹೀಗೆ ಗುರುತಿಸುವಾಗ ರಾಜ್ಯ ಸರ್ಕಾರ ನೀಡಿರುವ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು’ ಎಂದು ತಿಳಿಸಿದರು.

‘ಸರ್ವೆಗಿಂತ ಮೊದಲು ಗ್ರಾಮಾಂತರ ಪ್ರದೇಶದಲ್ಲಿ ಧ್ವನಿವರ್ಧಕದ ಮೂಲಕ ಸ್ಥಳೀಯರಿಗೆ ಮಾಹಿತಿ ನೀಡಬೇಕು. ಗ್ರಾಮಸಭೆ ಕರೆದು ಅಲ್ಲಿ ವಿಷಯವನ್ನು ಮಂಡಿಸಬೇಕು ಎಂದು ಸರ್ಕಾರದ ಸುತ್ತೋಲೆ ಇದೆ’ ಎಂದು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಬಿ.ಆರ್.ಜಯಂತ್ ಹೇಳಿದರು.

‘ಕೇಂದ್ರ ಸರ್ಕಾರ ಅರಣ್ಯ ಸಂರಕ್ಷಣಾ ಕಾಯ್ದೆಗೆ ತಿದ್ದುಪಡಿ ತಂದಿದ್ದು 1996ನೇ ಸಾಲಿಗಿಂತ ಮೊದಲು ಅರಣ್ಯದ ಸ್ವರೂಪವನ್ನು ಕಳೆದುಕೊಂಡಿರುವ, ಅದಕ್ಕಿಂತ ಮೊದಲು ಯಾವುದೇ ಸರ್ಕಾರದ ಸಂಸ್ಥೆಯಿಂದ ಮಂಜೂರಾಗಿರುವ ಅರಣ್ಯ ಭೂಮಿ ಅರಣ್ಯವೇ ಅಲ್ಲವೆಂದು ತಿದ್ದುಪಡಿಯಲ್ಲಿ ಹೇಳಲಾಗಿದೆ. ಈ ಅಂಶವನ್ನು ಅರಣ್ಯ ಇಲಾಖೆ ಅಧಿಕಾರಿಗಳು ಪರಿಗಣಿಸಬೇಕು’ ಎಂದು ಒತ್ತಾಯಿಸಿದರು.

ಪರಿಭಾವಿತ ಅರಣ್ಯದ ಕುರಿತು ಕೇವಲ ಮಾಹಿತಿ ಸಂಗ್ರಹಿಸಿ ಅಂಕಿ– ಅಂಶಗಳ ಸಮೇತ ವರದಿ ನೀಡಲಾಗುವುದು. ಯಾರನ್ನೂ ಒಕ್ಕಲೆಬ್ಬಿಸುವುದಕ್ಕೆ ಮುಂದಾಗುವುದಿಲ್ಲ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಸ್ಪಷ್ಟಪಡಿಸಿದರು.

ಉಪವಿಭಾಗಾಧಿಕಾರಿ ವೀರೇಶ್ ಕುಮಾರ್, ತಹಶೀಲ್ದಾರ್ ಪ್ರದೀಪ್, ಅರಣ್ಯ ಇಲಾಖೆ ಅಧಿಕಾರಿಗಳು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-42-265856091

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.