ಸಾಗರ: ‘ನಗರದಲ್ಲಿನ ಗುರುಭವನ ನಿರ್ಮಾಣ ಕಾಮಗಾರಿ ಪೂರ್ಣಗೊಳಿಸಲು ಸಂಘ ಆದ್ಯತೆ ನೀಡಲಿದೆ’ ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಾಲತೇಶಪ್ಪ ಹೇಳಿದರು.

ಇಲ್ಲಿನ ಗುರುಭವನದಲ್ಲಿ ಶನಿವಾರ ನಡೆದ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸ್ಥಳೀಯ ಶಾಖೆಯ ನೂತನ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿ ‘ಸರ್ಕಾರದಿಂದ ಹೆಚ್ಚಿನ ಅನುದಾನ ಪಡೆದು ಶೀಘ್ರ ಕಾಮಗಾರಿ ಪೂರೈಸಲಾಗುವುದು’ ಎಂದರು.

‘ತಾಲ್ಲೂಕಿನ ನಾಲ್ಕು ಹೋಬಳಿ ಕೇಂದ್ರಗಳಲ್ಲಿ ಟೀಚರ್ಸ್ ಕಾರ್ನರ್ ತೆರೆಯಲಾಗುವುದು. ಈ ಕೇಂದ್ರಗಳ ಮೂಲಕ ಶಿಕ್ಷಕರಿಗೆ ಅಗತ್ಯವಿರುವ ಆನ್ಲೈನ್ ಸೇವೆಯನ್ನು ಕಲ್ಪಿಸಲಾಗುವುದು’ ಎಂದು ಮಾಹಿತಿ ನೀಡಿದರು.

ಸಂಘದ ಉಪಾಧ್ಯಕ್ಷರಾದ ರಮೇಶ್ ಜೆ., ಚಂದ್ರಕಲಾ ಬಿ.ಆರ್., ಪ್ರಧಾನ ಕಾರ್ಯದರ್ಶಿ ಶಂಕರ್ ಜಿ.ಕೆ., ಕೋಶಾಧ್ಯಕ್ಷ ರಾಜಾಭಕ್ಷಿ ರಟ್ಟೆಹಳ್ಳಿ, ಸಹ ಕಾರ್ಯದರ್ಶಿಗಳಾದ ರಾಚಪ್ಪ ಎಂ.ಜೆ., ಮುಕ್ತ ಹೆಗಡೆ, ಸಂಘಟನಾ ಕಾರ್ಯದರ್ಶಿಗಳಾದ ಚಂದ್ರಪ್ಪ ಅಳೂರು, ಸೋನಿಯಾ ರಾಣಿ ನರೋನಾ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-42-1291983302

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.