ಸಾಗರ: ರಾಜ್ಯದಲ್ಲಿ ಕಾರ್ಯಕರ್ತರಿಂದಲೇ ಬೆಳೆದಿರುವ ಪಕ್ಷ ಯಾವುದಾದರೂ ಇದ್ದರೆ ಅದು ಜೆಡಿಎಸ್ ಮಾತ್ರ ಎಂದು ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ರಾಮಕೃಷ್ಣ ಹೇಳಿದರು.

ನಗರದಲ್ಲಿ ಈಚೆಗೆ ನಡೆದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.

ಎಚ್.ಡಿ. ಕುಮಾರಸ್ವಾಮಿ ಅವರು ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ಮಾಡಿದ ಒಳ್ಳೆಯ ಕೆಲಸಗಳನ್ನು ಜನರು ಇಂದಿಗೂ ನೆನಪಿಸಿಕೊಳ್ಳುತ್ತಿದ್ದಾರೆ. ರಾಜ್ಯ ಸರ್ಕಾರ ಭಿನ್ನಮತದಿಂದ ಬಳಲುತ್ತಿದ್ದು, ಅಭಿವೃದ್ಧಿ ಕುಂಠಿತಗೊಂಡಿದೆ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜಕೀಯ ನೆಲೆಒದಗಿಸಿದ್ದು ಜೆಡಿಎಸ್ ಪಕ್ಷ. ಆದಾಗ್ಯೂ ಅವರು ಜೆಡಿಎಸ್ ಬಗ್ಗೆ ಕೇವಲವಾಗಿ ಮಾತನಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಜೆಡಿಎಸ್ ತನ್ನ ಶಕ್ತಿಯನ್ನು ಮರಳಿ ಪಡೆದುಕೊಳ್ಳಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಕನ್ನಪ್ಪ ಬೆಳಲಮಕ್ಕಿ, ಪ್ರಮುಖರಾದ ಗೀತಾ ಸತೀಶ್, ಎಚ್.ಕೆ. ಅಣ್ಣಪ್ಪ, ಬಸವರಾಜ್ ಕುಂದೂರು, ರಮೇಶ್, ವಸಂತ ಶೇಟ್, ಜಯಲಕ್ಷ್ಮಿ ನಾರಾಯಣಪ್ಪ, ತ್ಯಾಗರಾಜ್, ನರಸಿಂಹಮೂರ್ತಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260329-42-1847919631

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.