ಸಾಗರ: ಕೇರಳ ರಾಜ್ಯದಲ್ಲಿ ಕಂಡುಬರುವ ದೇವಸ್ಥಾನಗಳ ಮಾದರಿಯಲ್ಲಿ ಇಲ್ಲಿನ ಇತಿಹಾಸ ಪ್ರಸಿದ್ಧ ಗಣಪತಿ ದೇವಸ್ಥಾನದ ಪುನರ್ ನಿರ್ಮಾಣ ಮಾಡಲಾಗುವುದು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದರು.

ಇಲ್ಲಿನ ಮಹಾಗಣಪತಿ ರಥೋತ್ಸವದ ಅಂಗವಾಗಿ ಆಯೋಜಿಸಲಾಗಿದ್ದ ಸಾಂಸ್ಕೃತಿಕ ಕಾರ್ಯಕ್ರಮಗಳ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.

ದೇವಸ್ಥಾನದ ಕಲ್ಯಾಣ ಮಂಟಪ ನವೀಕರಣಗೊಳಿಸಿ ದೇವಸ್ಥಾನದ ಎದುರು ಸುಸಜ್ಜಿತ ಉದ್ಯಾನ ನಿರ್ಮಿಸಲಾಗುವುದು ಎಂದು ಭರವಸೆ ನೀಡಿದರು.

₹ 3.50 ಕೋಟಿ ವೆಚ್ಚದಲ್ಲಿ ದೇವಸ್ಥಾನದ ಸಮುಚ್ಚಯ ನಿರ್ಮಾಣವಾಗುತ್ತಿದ್ದು, ಪ್ರಥಮ ಹಂತದಲ್ಲಿ ₹ 65 ಲಕ್ಷ ಮಂಜೂರಾಗಿದೆ. ಈಗಾಗಲೇ ಮಹಾದ್ವಾರಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗಿದೆ. ಸಾರ್ವಜನಿಕರ ಸಹಕಾರದಿಂದ ರಥೋತ್ಸವ ಯಶಸ್ವಿಯಾಗಿ ನಡೆದಿದೆ ಎಂದು ಹೇಳಿದರು.

ಜಾತ್ರೆಯ ವೇದಿಕೆಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸುವುದರಿಂದ ಸ್ಥಳೀಯ ಕಲಾವಿದರ ಪ್ರತಿಭಾ ಪ್ರದರ್ಶನಕ್ಕೆ ವೇದಿಕೆ ಕಲ್ಪಿಸಿದಂತಾಗುತ್ತದೆ. ಮುಂದಿನ ವರ್ಷಗಳಲ್ಲಿ ಕಾರ್ಯಕ್ರಮ ನೀಡುವ ಕಲಾವಿದರಿಗೆ, ಸಾಂಸ್ಕೃತಿಕ ತಂಡಗಳಿಗೆ ಹೆಚ್ಚಿನ ಸಂಭಾವನೆ ನೀಡಲು ಸೂಕ್ತ ವ್ಯವಸ್ಥೆ ಮಾಡಲಾಗುವುದು ಎಂದರು.

ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಟಿ.ವಿ.ಪಾಂಡುರಂಗ ಅಧ್ಯಕ್ಷತೆ ವಹಿಸಿದ್ದರು. ಪ್ರಮುಖರಾದ ಮಧುಮಾಲತಿ, ಐ.ವಿ. ಹೆಗಡೆ, ಕೆ.ಸಿ. ನವೀನ್, ಗಣಪತಿ ಮಂಡಗಳಲೆ, ವಿ.ಟಿ. ಸ್ವಾಮಿ, ಶಿವಮೂರ್ತಿ, ಅರವಿಂದ ರಾಯ್ಕರ್, ತೋಯಜಾಕ್ಷಿ, ಈಶ್ವರ ಉಪ್ಪಾರ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260330-42-641630639

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.