ಸಾಗರ: ಮಲೆನಾಡು ಪ್ರದೇಶದಲ್ಲಿರುವ ಮುಳಗಡೆ ಸಂತ್ರಸ್ತರು, ಕಂದಾಯ, ಅರಣ್ಯ ಭೂಮಿ ಬಗರ್ ಹುಕುಂ ಸಾಗುವಳಿದಾರರನ್ನು ನ್ಯಾಯಾಲಯದ ಆದೇಶ ಅಂತಿಮಗೊಳ್ಳುವವರೆಗೂ ಒಕ್ಕಲೆಬ್ಬಿಸಬಾರದು ಎಂದು ಮಲೆನಾಡು ರೈತ ಹೋರಾಟ ವೇದಿಕೆ ಜಿಲ್ಲಾ ಸಂಚಾಲಕ ತೀ.ನ.ಶ್ರೀನಿವಾಸ್ ಒತ್ತಾಯಿಸಿದ್ದಾರೆ.

ಮಂಜೂರಾತಿಗಾಗಿ ಅರ್ಜಿ ಸಲ್ಲಿಸಿರುವ ರೈತರ ಅರ್ಜಿ ಅಂತಿಮವಾಗಿ ಇತ್ಯರ್ಥವಾಗುವವರೆಗೂ ಅವರನ್ನು ಒಕ್ಕಲೆಬ್ಬಿಸಬಾರದು ಎಂಬ ನ್ಯಾಯಾಲಯದ ನಿರ್ದೇಶನವನ್ನು ಅರಣ್ಯ ಇಲಾಖೆ ಅಧಿಕಾರಿಗಳು ಗಾಳಿಗೆ ತೂರುತ್ತಿದ್ದಾರೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಅವರು ದೂರಿದ್ದಾರೆ.

ಅರಣ್ಯ ಭೂಮಿ ಸಾಗುವಳಿದಾರರಿಗೆ, ಶರಾವತಿ ಮುಳುಗಡೆ ಸಂತ್ರಸ್ತರಿಗೆ ಭೂಮಿಯ ಹಕ್ಕು ನೀಡುವ ಸಂಬಂಧ ವಿಶೇಷ ತನಿಖಾ ತಂಡ ಪರಿಶೀಲನೆ ನಡೆಸುತ್ತಿದೆ. ಆದಾಗ್ಯೂ ಗೋಮಾಳ, ಹುಲ್ಲುಬನಿ, ಜಾಡಿ, ಪರಿಭಾವಿತ ಅರಣ್ಯ ಮತ್ತಿತರ ಹೆಸರಿನಲ್ಲಿ ಸಾಗುವಳಿದಾರರನ್ನು ಒಕ್ಕಲೆಬ್ಬಿಸಲು ಮುಂದಾಗಿರುವುದು ಖಂಡನೀಯ ಎಂದು ಅವರು ಹೇಳಿದರು.

ಇಲ್ಲಿನ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು ರೈತರನ್ನು ಒಕ್ಕಲೆಬ್ಬಿಸುವುದನ್ನು ತಡೆಯುವ ಸಂಬಂಧ ಕೇವಲ ಹೇಳಿಕೆ ನೀಡಿದರೆ ಸಾಲದು. ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡುವ ಜೊತೆಗೆ ನ್ಯಾಯಾಲಯದ ಆದೇಶ ಉಲ್ಲಂಘಿಸುವ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ವಕೀಲ ಕುಮಾರಸ್ವಾಮಿ, ಪರಶುರಾಮಪ್ಪ ಬರೂರು, ಪರಶುರಾಮಪ್ಪ ಬಿಳಿಸಿರಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260426-42-1240474386

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.