ಸಾಗರ: ‘ಎಲ್ಬಿ ಮತ್ತು ಎಸ್ಬಿಎಸ್ ಕಾಲೇಜಿನ ಆವರಣದಲ್ಲಿರುವ ಆಟದ ಮೈದಾನಕ್ಕೆ ಕ್ರೀಡಾಂಗಣದ ಸ್ವರೂಪ ನೀಡಲಾಗುತ್ತಿದೆ’ ಎಂದು ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನದ ಅಧ್ಯಕ್ಷ ಬಿ.ಆರ್. ಜಯಂತ್ ಹೇಳಿದರು.

ಎಲ್ಬಿ ಕಾಲೇಜಿನಲ್ಲಿ ಶುಕ್ರವಾರ ನಡೆದ ಲಾಲ್ ಬಹದ್ದೂರ್ ಚಾಂಪಿಯನ್ಸ್ ಕ್ರಿಕೆಟ್ ಟೂರ್ನಿ ಉದ್ಘಾಟಿಸಿ ಮಾತನಾಡಿದರು. ಇಲ್ಲಿನ ಕಾಲೇಜು ಮೈದಾನ ಉತ್ತಮ ಪರಿಸರದಲ್ಲಿದೆ. ಇದನ್ನು ಅಭಿವೃದ್ಧಿಪಡಿಸಲು ಕಾಲೇಜಿನ ಆಡಳಿತ ಮಂಡಳಿ ಮುಂದಾಗಿದೆ’ ಎಂದು ತಿಳಿಸಿದರು.

‘ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡುವ ಜೊತೆಗೆ ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನವು ಕ್ರೀಡೆಯಲ್ಲಿ ಆಸಕ್ತಿಯುಳ್ಳ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುವ ಕೆಲಸವನ್ನು ಹಲವು ದಶಕಗಳಿಂದ ಮಾಡುತ್ತಾ ಬಂದಿದೆ. ಇಲ್ಲಿನ ವಿದ್ಯಾರ್ಥಿಗಳು ಹಲವು ಕ್ರೀಡೆಗಳಲ್ಲಿ ರಾಷ್ಟ್ರ, ರಾಜ್ಯಮಟ್ಟದಲ್ಲಿ ಉನ್ನತ ಸಾಧನೆ ಮಾಡುವ ಜೊತೆಗೆ ಕ್ರೀಡೆಯಿಂದಲೇ ತಮ್ಮ ಬದುಕು ರೂಪಿಸಿಕೊಂಡಿದ್ದಾರೆ’ ಎಂದರು.

ಕಾಲೇಜಿನ ಪ್ರಾಂಶುಪಾಲ ಲಕ್ಷ್ಮೀಶ್ ಎ.ಎಸ್., ಎಂಡಿಎಫ್ನ ಪ್ರಧಾನ ಕಾರ್ಯದರ್ಶಿ ಎಚ್.ಎಂ. ಶಿವಕುಮಾರ್, ಖಜಾಂಚಿ ಕೆ. ವೆಂಕಟೇಶ್, ಸಹ ಕಾರ್ಯದರ್ಶಿ ಎಂ.ಆರ್. ಸತ್ಯನಾರಾಯಣ, ದೈಹಿಕ ಶಿಕ್ಷಣ ನಿರ್ದೇಶಕ ಭರತರಾಜ್, ನೆಕ್ಸ್ಟ್ ಜೆನ್ ಕ್ರೀಡಾ ಸಂಸ್ಥೆಯ ಶಶಾಂಕ್ ಎಲ್.ಜಿ. ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-42-348599112

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.