ಸಾಗರ: ತಾಲ್ಲೂಕಿನ ಬೇಸೂರು ಗ್ರಾಮದಲ್ಲಿ ಪರಮಾಣು ವಿದ್ಯುತ್ ಸ್ಥಾವರ ಸ್ಥಾಪನೆ ಪ್ರಸ್ತಾಪ ಬಂದಿರುವುದನ್ನು ವಿರೋಧಿಸಿ ಮೇ 7ರಂದು ಸಾಗರದಲ್ಲಿ ಪಕ್ಷಾತೀತವಾಗಿ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ.

ಬುಧವಾರ ಕೋಳೂರು ಗ್ರಾಮದಲ್ಲಿ ನಡೆದ ಗ್ರಾಮಸ್ಥರ ಸಮಾಲೋಚನಾ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು. ಅಂದು ಬೆಳಿಗ್ಗೆ 10 ಕ್ಕೆ ನಗರದ ಶಿವಪ್ಪನಾಯಕ ವೃತ್ತದಿಂದ ಮೆರವಣಿಗೆ ಹೊರಟು ಗಾಂಧಿ ಮೈದಾನದಲ್ಲಿ ಬಹಿರಂಗ ಸಭೆ ನಡೆಸಲು ನಿರ್ಣಯ ಕೈಗೊಳ್ಳಲಾಗಿದೆ.

ಮಲೆನಾಡಿನ ಭವಿಷ್ಯಕ್ಕೆ ಮಾರಕವಾಗುವ ಅಣು ವಿದ್ಯುತ್ ಸ್ಥಾವರಕ್ಕೆ ಯಾವುದೆ ಕಾರಣಕ್ಕೂ ನಮ್ಮ ಭಾಗದಲ್ಲಿ ಅವಕಾಶ ನೀಡಬಾರದು. ಅತ್ಯಂತ ಸೂಕ್ಷ್ಮ ಪ್ರದೇಶವಾಗಿರುವ ಇಲ್ಲಿ ಅಣು ಸ್ಥಾವರ ನಿರ್ಮಾಣವಾದರೆ ಮಲೆನಾಡಿನ ಸ್ವರೂಪವೆ ನಕಾರಾತ್ಮಕವಾಗಿ ಬದಲಾಗಲಿದೆ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಿ.ಆರ್.ಜಯಂತ್ ಹೇಳಿದರು.

ಪ್ರಸ್ತಾವಿತ ಅಣು ಸ್ಥಾವರದ ವಿರುದ್ದದ ಹೋರಾಟ ನಮ್ಮ ಅಳಿವು, ಉಳಿವಿನ ಪ್ರಶ್ನೆಯಾಗಿದೆ. ಸಂದರ್ಭ ಬಂದರೆ ಜಿಲ್ಲಾಧಿಕಾರಿ ಕಚೇರಿ ಎದುರು ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲು ನಾವೆಲ್ಲಾ ಸಜ್ಜಾಗಬೇಕು ಎಂದು ಹೇಳಿದರು.

ಅಣು ಸ್ಥಾವರ ಇಲ್ಲಿ ನಿರ್ಮಾಣವಾದರೆ ಮಲೆನಾಡು ಮಸಣವಾಗುತ್ತದೆ. ಈ ಯೋಜನೆಯ ವಿರುದ್ಧ ಒಕ್ಕೊರಲಿನ ಧ್ವನಿ ಮೊಳಗಬೇಕಿದೆ. ಸಂಸದರು, ಶಾಸಕರ ಗಮನಕ್ಕೆ ಬಾರದಂತೆ ಸ್ಥಾವರ ಸ್ಥಾಪನೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಪತ್ರ ವ್ಯವಹಾರ ನಡೆಸಿರುವುದು ಖಂಡನೀಯ ಎಂದು ಮಲೆನಾಡು ರೈತ ಹೋರಾಟ ವೇದಿಕೆ ಅಧ್ಯಕ್ಷ ತೀ.ನ.ಶ್ರೀನಿವಾಸ್ ಹೇಳಿದರು.

ಈಗಾಗಲೇ ಎರಡು ಬಾರಿ ಜಲ ವಿದ್ಯುತ್ ಯೋಜನೆಗಾಗಿ ಈ ಭಾಗದ ಜನ ಮುಳುಗಡೆ ಸಂತ್ರಸ್ತರಾಗಿ ಸಾಕಷ್ಟು ಸಂಕಷ್ಟಗಳನ್ನು ಅನುಭವಿಸಿದ್ದಾರೆ. ಈಗ ಅಣು ಸ್ಥಾವರ ನಿರ್ಮಾಣ ಪ್ರಸ್ತಾಪ ಕೇಳಿ ಬಂದಿರುವುದು ಆಘಾತಕಾರಿ ಸಂಗತಿಯಾಗಿದೆ. ಇದನ್ನು ವಿರೋಧಿಸಿ ನಡೆಯುವ ಹೋರಾಟಕ್ಕೆ ಮಲೆನಾಡಿನ ಸಮಸ್ತ ಜನರು ಕೈಜೋಡಿಸಬೇಕು ಎಂದು ಅಣು ಸ್ಥಾವರ ವಿರೋಧಿ ಹೋರಾಟ ಸಮಿತಿ ಅಧ್ಯಕ್ಷ ಬಿ.ಎ.ಇಂದೂಧರ ಬೇಸೂರು ಮನವಿ ಮಾಡಿದರು.

ಪ್ರಮುಖರಾದ ಗಂಗಾಧರ ಗೌಡ, ಮಂಜಪ್ಪ, ಬಸಪ್ಪ, ಹಾಲಪ್ಪ ಗೌಡ, ರೂಪಾ, ಶಾರದಾ, ನಾರಾಯಣ, ಯಶೋಧ, ಶೋಭಾ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-42-879800761

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.