ಸಾಗರ: ‘ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ ಕೆಲಸ ಅತ್ಯಂತ ಸವಾಲಿನದ್ದಾಗಿದೆ. ಈ ಸಂಬಂಧ ಸ್ಥಳೀಯ ಸಂಸ್ಥೆಗಳೊಂದಿಗೆ ಸಾರ್ವಜನಿಕರ ಸಹಕಾರ ಅತ್ಯಗತ್ಯ’ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.

ಇಲ್ಲಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಲಯನ್ಸ್ ಸಂಸ್ಥೆ ಈಚೆಗೆ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಪ್ಲಾಸ್ಟಿಕ್ ಬಾಟಲ್ಗಳ ಸಂಗ್ರಹಣಾ ಘಟಕ ವಿತರಣೆಗೆ ಚಾಲನೆ ನೀಡಿ ಅವರು ಮಾತನಾಡಿದರು.

ಪ್ಲಾಸ್ಟಿಕ್ ಬಾಟಲ್ಗಳ ಬಳಕೆ ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿದೆ. ಹೀಗೆ ಬಳಸಿದ ಬಾಟಲ್ಗಳನ್ನು ಎಲ್ಲೆಂದರಲ್ಲಿ ಎಸೆಯುವ ಪ್ರವೃತ್ತಿಯೂ ಹೆಚ್ಚುತ್ತಿದೆ. ಇದನ್ನು ತಡೆಯಲು ಬಾಟಲ್ಗಳನ್ನು ಒಂದೆಡೆ ಸಂಗ್ರಹಿಸುವ ಘಟಕವನ್ನು ಲಯನ್ಸ್ ಸಂಸ್ಥೆ ವಿತರಿಸುತ್ತಿರುವುದು ಶ್ಲಾಘನೀಯ ಎಂದರು.

‘ಇಲ್ಲಿನ ಲಯನ್ಸ್ ಸಂಸ್ಥೆ ಹಲವು ವರ್ಷಗಳಿಂದ ತೋರುತ್ತಿರುವ ಸಾಮಾಜಿಕ ಕಳಕಳಿ ಅನುಕರಣೀಯವಾದದ್ದು. ಕೇವಲ ತೋರಿಕೆ ಅಥವಾ ಪ್ರಚಾರಕ್ಕಾಗಿ ಕಾರ್ಯಕ್ರಮಗಳನ್ನು ನಡೆಸದೆ ಜನೋಪಯೋಗಿ ಯೋಜನೆಗಳನ್ನು ಜಾರಿಗೆ ತರುತ್ತಿರುವುದು ಸಂಸ್ಥೆಯ ಹೆಗ್ಗಳಿಕೆಯಾಗಿದೆ’ ಎಂದು ಹೇಳಿದರು.

ಲಯನ್ಸ್ ಅಧ್ಯಕ್ಷ ಪ್ರಸನ್ನ ಟಿ, ಪ್ರಮುಖರಾದ ಅಶ್ವಿನಿಕುಮಾರ್, ಟಿ.ವಿ.ಪಾಂಡುರಂಗ, ಈ.ನಾಗರಾಜ್, ಅಶೋಕ್ ಬೇಳೂರು, ಸುರೇಶ್, ಗಣಪತಿ ಮಂಡಗಳಲೆ, ಮಧುಮಾಲತಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-42-1665582944

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.