ಸಾಗರ: ರಸ್ತೆ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಸಂಬಂಧಿಗಳು ದೂರು ದಾಖಲಿಸಲು ಬಂದಾಗ ಅದನ್ನು ಸ್ವೀಕರಿಸದೇ ಪೊಲೀಸರು ವಿಳಂಬ ಮಾಡಿದ್ದಾರೆ ಎಂದು ಆರೋಪಿಸಿ ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ ಗುರುವಾರ ನಗರ ಪೊಲೀಸ್ ಠಾಣೆ ಎದುರು ಧರಣಿ ನಡೆಸಿದರು.

ನಗರದ ಸಿಗಂದೂರು ರಸ್ತೆಯಲ್ಲಿ ಹುಲಿಮನೆ ಗ್ರಾಮದ 65 ವರ್ಷದ ಲಕ್ಷ್ಮಣ ಅವರು ಕ್ರೇನ್ ಡಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟಿದ್ದರು. ಘಟನೆ ಸಂಬಂಧ ಮೃತರ ಸಂಬಂಧಿಕರು ದೂರು ನೀಡಲು ಬಂದಾಗ ಕಾನೂನು ಕ್ರಮ ಕೈಗೊಳ್ಳುವಲ್ಲಿ ಪೊಲೀಸರು ಉದಾಸೀನತೆ ತೋರಿದ್ದಾರೆ ಎಂದು ಮಲ್ಲಿಕಾರ್ಜುನ ಹಕ್ರೆ ಆರೋಪಿಸಿದರು.

‘ದೂರು ನೀಡಲು ವಿಳಂಬವಾಗಿದ್ದನ್ನು ಪ್ರಶ್ನಿಸಿದ್ದಕ್ಕೆ ನಗರ ಠಾಣೆ ಸರ್ಕಲ್ ಇನ್ಸ್ಪೆಕ್ಟರ್ ಪುಲ್ಲಯ್ಯ ನನಗೆ ಬೆದರಿಕೆ ಹಾಕಿದ್ದಾರೆ. ಕರ್ತವ್ಯ ಲೋಪ ಎಸಗಿರುವ ಪೊಲೀಸ್ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.

ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಚಂದ್ರು ಹುಲಿಮನೆ, ವಿರೂಪಾಕ್ಷ, ಅರುಣ ಪೂಜಾರಿ, ಮಾಪು ಇಕ್ಕೇರಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260417-42-1955695353

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.