ತ್ಯಾಗರ್ತಿ: ಸಾಗರ ತಾಲ್ಲೂಕಿನ ಉಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬ್ರಾಹ್ಮಣ ಮಂಚಾಲೆಯಲ್ಲಿ ಸಂಶಯಾಸ್ಪದವಾಗಿ ಅಲೆದಾಡುತ್ತಿದ್ದ ವ್ಯಕ್ತಿಯನ್ನು ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಈತನನ್ನು ಹೊಸನಗರ ತಾಲ್ಲೂಕಿನ ಸಂತೋಷ್ ಕುಮಾರ್.ಕೆ.ಆರ್ (43) ಎಂದು ಗುರುತಿಸಲಾಗಿದೆ.

ವಿಚಾರಣೆ ವೇಳೆ ಈತ ನಾಗರತ್ನಾ ಅವರ ಮನೆಯಲ್ಲಿ ಕಳ್ಳತನ ಮಾಡಿದ್ದಾಗಿ ಒಪ್ಪಿಕೊಂಡಿದ್ದಾನೆ. ಫೆ. 19ರಂದು ಹಗಲು ಹೊತ್ತಿನಲ್ಲೇ ನಾಗರತ್ನ ಅವರ ಮನೆ ಬಾಗಿಲು ಮುರಿದು ಅಂದಾಜು ₹ 70 ಸಾವಿರ ಮೌಲ್ಯದ 8.5 ಗ್ರಾಂ ಚಿನ್ನದ ಆಭರಣ ಹಾಗೂ ₹ 7 ಸಾವಿರ ನಗದು ದೋಚಿ ಪರಾರಿಯಾಗಿದ್ದ. ಈ ಕುರಿತು ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈತನಿಂದ ಒಟ್ಟು 12.21 ಗ್ರಾಂ ತೂಕದ ಚಿನ್ನದ ಆಭರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260321-42-1944752456

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.